Categories: Latest

ಮನೆ ಕಳ್ಳತನಕ್ಕೆ ಕಡಿವಾಣ: ಕಾಮಸಮುದ್ರಂ ಪೊಲೀಸ್ ಕಾರ್ಯಾಚರಣೆಯಲ್ಲಿ ಆರೋಪಿ ಬಂಧನ, ₹6.70 ಲಕ್ಷ ಮೌಲ್ಯದ ಚಿನ್ನ ವಶ

ಕಾಮಸಮುದ್ರಂ: ಕಾಮಸಮುದ್ರಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂದರ್ಭ ಪೊಲೀಸರು ರೂ.6.70 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಏಪ್ರಿಲ್ 4 ರಂದು, ಪೊಲೇನಹಳ್ಳಿ ಗ್ರಾಮದ ನಿವಾಸಿ ಮುನಿವೆಂಕಟಪ್ಪ ಅವರು ತಮ್ಮ ಮನೆಯಲ್ಲಿ ನಡೆದಿದ್ದ ಕಳ್ಳತನ ಕುರಿತು ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಡಿವೈಎಸ್ಪಿ ಎಸ್. ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಜಿ.ಸಿ. ನಾರಾಯಣಸ್ವಾಮಿ ಮತ್ತು ಪಿಎಸ್‌ಐ ಬಿ.ವಿ. ಕಿರಣ್ ಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಿದರು.

ತೀವ್ರ ಪರಿಶೋಧನೆ ಹಾಗೂ ತಂತ್ರಬದ್ಧ ಕಾರ್ಯಾಚರಣೆಯ ನಂತರ, ಬಂಗಾರಪೇಟೆ ತಾಲ್ಲೂಕಿನ ಶಿವಲಿಂಗ ಗ್ರಾಮದ ನಿವಾಸಿ ಚಂದ್ರಪ್ಪ ಎಂಬಾತನನ್ನು ಬಂಧಿಸಲಾಯಿತು. ತನಿಖೆಯಲ್ಲಿ ಆತನ ವಿರುದ್ಧ ಕಾಮಸಮುದ್ರಂ ಹಾಗೂ ಬಂಗಾರಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆ ಕಳ್ಳತನ ಪ್ರಕರಣಗಳಲ್ಲಿ ಸಕ್ರಿಯ ಪಾತ್ರವಿದೆ ಎಂಬುದು ದೃಢಪಟ್ಟಿದೆ. ಆರೋಪಿಯಿಂದ ಒಟ್ಟು 69 ಗ್ರಾಂ ಚಿನ್ನಾಭರಣಗಳು ವಶಪಡಿಸಲ್ಪಟ್ಟಿದ್ದು, ಮೌಲ್ಯ ರೂ.6,70,000ಕ್ಕೆ ಸಮಾನವಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐ ಕಿರಣ್ ಕುಮಾರ್ ಅವರೊಂದಿಗೆ ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿಗಳಾದ ಮಂಜುನಾಥರೆಡ್ಡಿ, ಮುನಾವರ್ ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷ್ಮಣ ತೇಲಿ ಮತ್ತು ಜೀಪ್ ಚಾಲಕ ಗುರುಮೂರ್ತಿ ಪ್ರಮುಖ ಪಾತ್ರವಹಿಸಿದ್ದರು. ಅವರ ಶ್ರಮವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅಭಿನಂದಿಸಿದ್ದಾರೆ.

ವರದಿ: ರೋಷನ್ ಜಮೀರ್

nazeer ahamad

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

39 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago