ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ.
ಆರೋಪಿಗಳು ಗೃಹಿಣಿಯ ಫೋಟೋಗಳನ್ನು ಮಾರ್ಪಡಿಸಿ, ಅವನ್ನು ಮೊಬೈಲ್‌ಗೆ ಕಳುಹಿಸಿ ₹30 ಲಕ್ಷ ಹಣ ನೀಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಹಣ ನೀಡದಿದ್ದರೆ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗೃಹಿಣಿ ಹಾಗೂ ಕುಟುಂಬಸ್ಥರು ಹಣ ನೀಡಲು ನಿರಾಕರಿಸಿದ ಬಳಿಕ, ಆರೋಪಿಗಳು ಇನ್‌ಸ್ಟಾಗ್ರಾಂನಲ್ಲಿ ನಕಲಿ ಖಾತೆ ತೆರೆಯುವ ಮೂಲಕ ಎಡಿಟ್ ಮಾಡಿದ ಫೋಟೋಗಳನ್ನು ಹರಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, “₹300ಕ್ಕೆ ಲಭ್ಯ” ಎಂಬ ಅವಹೇಳನಕಾರಿ ಶೀರ್ಷಿಕೆಯೊಂದಿಗೆ ಪೋಸ್ಟ್‌ಗಳನ್ನು ಅಪ್‌ಲೋಡ್ ಮಾಡಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಪೋಸ್ಟ್‌ಗಳನ್ನು ಕಂಡು ಮನನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿದುಬಂದಿದೆ.
ಈ ಕುರಿತು ಗೃಹಿಣಿಯ ಪತಿ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಾವಿಕೆರೆ ಗ್ರಾಮದ ಅಕ್ಷಯ್ ಹಾಗೂ ಸಾಹುಲ್ ಹಮೀದ್ ವಿರುದ್ಧ ಆರೋಪ ಮಾಡಿದ್ದಾರೆ. ಇದೇ ಆರೋಪಿಗಳು ಈ ಹಿಂದೆ ಮತ್ತೊಬ್ಬ ಮಹಿಳೆಯನ್ನೂ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವೂ ಕೇಳಿಬಂದಿದೆ.
ಮೊಬೈಲ್ ಸಂಖ್ಯೆ ಸೇರಿದಂತೆ ಸಾಕ್ಷ್ಯಾಧಾರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಡಿಟ್ ಫೋಟೋಗಳನ್ನು ಹರಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಲಕ್ಕವಳ್ಳಿ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…