Latest

ಹುಬ್ಬಳ್ಳಿ ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ವೃದ್ಧ ಬಲಿ: ಸಾಲದ ಕಿರುಕುಳಕ್ಕೆ ನೇಣಿಗೆ ಶರಣು

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ರಾಜ್ಯದಾದ್ಯಂತ ಅಸಂಖ್ಯ ಪ್ರಕರಣಗಳು ವರದಿಯಾಗುತ್ತಿರುವ ವೇಳೆ, ಮತ್ತೊಂದು ದುರಂತ ಸುದ್ದಿ ಹುಬ್ಬಳ್ಳಿಯಿಂದ ಬಂದಿದೆ. ಎಸ್.ಎಂ. ಕೃಷ್ಣ ನಗರದಲ್ಲಿ ವಾಸವಿದ್ದ 65 ವರ್ಷದ ಭಾಷಾ ಸಾಬ್ ಸಂಕೇಶ್ವರ ಅವರು, ಸಾಲದ ಬಾಧೆಯಿಂದ ಬಳಲುತ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋಲೀಸ್ ಮಾಹಿತಿ ಪ್ರಕಾರ, ಭಾಷಾ ಸಾಬ್ ಅವರು ಲಲಿತ, ಕಿಟ್ಯಾ, ವಿನೋದ್ ಬಂಕಾಪುರ ಮತ್ತು ಅಶ್ಪಾಕ್ ಎಂಬವರಿಗೆ ಸಾಲಿಯಾಗಿದ್ದರು. ಇವರಿಂದ ನಿರಂತರವಾಗಿ ಹಣ ವಾಪಸು ಮಾಡುವ ದಬ್ಬಾಳಿಕೆಗೆ ಒಳಗಾಗುತ್ತಾ, ಮಾನುಷ್ಯತ್ವದ ಮಿತಿಯನ್ನು ಮೀರುವಂತೆ ಕಿರುಕುಳ ಎದುರಿಸುತ್ತಿದ್ದ ಅವರು ಕೊನೆಗೆ ಜೀವನಬದೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಆತ್ಮಹತ್ಯೆಗೆ ಮುನ್ನ, ದೈನಂದಿನ ಕಿರುಕುಳ ವಿವರಿಸುವ ವಿಡಿಯೋ  ಮಾಡಿ, ಅದರಲ್ಲಿ ಇವರಿಂದ ನಡೆಯುತ್ತಿರುವ ದೌರ್ಜನ್ಯವನ್ನು ಬಹಿರಂಗಪಡಿಸಿದ್ದಾರೆ. ಬಳಿಕ ಮನೆಯಲ್ಲೇ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ನವ ಕಾನೂನು ಜಾರಿಗೊಳಿಸಿದ್ದರೂ, ಸಾಲದ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆ ಈಗಲೂ ಮುಂದುವರೆದಿರುವುದು ಆತಂಕದ ವಿಚಾರವಾಗಿದೆ. ಜನಸಾಮಾನ್ಯರ ಬದುಕು ಕದಿಯುತ್ತಿರುವ ಇಂತಹ ದಂಧೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆ ಮತ್ತೆ ಸಾಬೀತಾಗಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

24 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

1 day ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago