Latest

ಕಬ್ಜ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್ ಚಂದ್ರು ಕಾಂಬಿನೇಶನ್‌ನ ಬಹು ನಿರೀಕ್ಷಿತ ಸಿನಿಮಾ ಕಬ್ಜ ತೆರೆಗೆ ಬಂದಿದೆ. ಸೆಟ್ಟೇರಿದಾಗಿನಿಂದಲೂ ವಿವಿಧ ಕಾರಣಗಳಿಂದಾಗಿ ಸತತವಾಗಿ ಸದ್ದು ಮಾಡುತ್ತಿದ್ದು ಕಬ್ಜ ಚಿತ್ರವನ್ನು ನೋಡಲೇಬೇಕೆಂದು ಸಿನಿ ರಸಿಕರು ಹಾಗೂ ಉಪೇಂದ್ರ, ಕಿಚ್ಚ ಸುದೀಪ್ ಮತ್ತು ಶಿವ ರಾಜ್‌ಕುಮಾರ್ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಖರೀದಿಸಿ ಮೊದಲ ದಿನ ಚಿತ್ರಮಂದಿರಕ್ಕೆ ಕಾಲಿಟ್ಟಿದ್ದರು.
ದೊಡ್ಡ ಮಟ್ಟದ ಹೈಪ್‌ನೊಂದಿಗೆ ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟ ಕಬ್ಜ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿತು. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾದ ಕಬ್ಜ ಚಿತ್ರಕ್ಕೆ ಎಲ್ಲೆಡೆ ಮೊದಲ ದಿನ ಪಾಸಿಟಿವ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ನೋಡಿ ಹೊರಬಂದ ಸಿನಿ ರಸಿಕರು ಚಿತ್ರದ ಮೇಕಿಂಗ್, ಛಾಯಾಗ್ರಹಣ, ಹಿನ್ನೆಲೆ ಸಂಗೀತ ಹಾಗೂ ಸಂಕಲನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆರ್ ಚಂದ್ರು ಶ್ರಮಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ಹೀಗೆ ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ಕಬ್ಜ ಚಿತ್ರ ಬೆಂಗಳೂರು ನಗರದಲ್ಲಿ ಎರಡನೇ ದಿನ ತನ್ನ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ವರ್ಷ ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಾದ ಎರಡನೇ ದಿನಕ್ಕೆ 600ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿರುವ ಮೊದಲನೆಯ ಚಿತ್ರ ಇದಾಗಿದೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

22 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

22 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

22 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

22 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

22 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

22 hours ago