ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿರುವ ಭೀಕರ ಘಟನೆಯೊಂದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪಟ್ಟಣದ ಸಂತೆಯ ದಿನದ ಮಧ್ಯಾಹ್ನ, ಜನಸಂದಣಿ ನಡುವೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕ್ರೂರವಾಗಿ ಹತ್ಯೆ ಮಾಡಿದ್ದಾರೆ.
ಸಾಮಾನ್ಯವಾಗಿ ಜನಸಂಚಾರದಿಂದ ಕಿಕ್ಕಿರಿದ ಸಂತೆಯ ವಾತಾವರಣ, ಈ ದಾಳಿಯಿಂದ ಕೆಲ ಕ್ಷಣಗಳಲ್ಲಿ ಭೀತಿಗೊಳಪಟ್ಟಿತು. ದಾಳಿಗೆ ಗುರಿಯಾದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತನನ್ನು ಹುಸೇನ ಕಿಲ್ಲೇದಾರ (25) ಎಂದು ಗುರುತಿಸಲಾಗಿದೆ. ಅವರು ಹುಕ್ಕೇರಿಯ ಅವರಗೋಳ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ಹತ್ಯೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ನಡೆದ ತಕ್ಷಣ ಹುಕ್ಕೇರಿ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ. ಸಂತೆಯ ದಿನದ ನಡುಬೀದಿಯಲ್ಲಿ ನಡೆದಿರುವ ಈ ಕೊಲೆ ಸ್ಥಳೀಯರಲ್ಲಿ ಆತಂಕದ ವಾತಾವರಣವನ್ನು ಉಂಟುಮಾಡಿದೆ. ವರದಿ: ಶಿವು ಕುಂಬಾರ
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…