Latest

ರಾಜ್ಯದಲ್ಲೆ ಪ್ರಥಮವಾಗಿ ಮೈಕ್ರೋ ಫೈನಾನ್ಸ್ ನ ನಾಲ್ವರು ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿರುವ ಹುಲ್ಲಹಳ್ಳಿ ಪೋಲೀಸರು

ನಂಜನಗೂಡು: ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಬ್ಬರಕ್ಕೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ. ರಾಜ್ಯದಲ್ಲೇ ಮೊಟ್ಟ ಮೊದಲನೆಯದಾಗಿ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಮಹತ್ತರ ಹೆಜ್ಜೆ ಹಾಕಿ ನಾಲ್ಕು ಮಂದಿ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿದ್ದಾರೆ
ಪ್ರಕರಣ ದಾಖಲಾದ ಫೈನಾನ್ಸ್ ಕಂಪನಿಗಳ ನಾಲ್ವರು ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ. ಎಫ್ ಐ ಆರ್ ದಾಖಲು ಮಾಡಿರುವ ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22),ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23),ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್ ಲೋಕೇಶ್(25) ಹಾಗೂ ಐಡಿಎಫ್ ಸಿ ಫೈನಾನ್ಸ್ ನ ಗ್ರೂಪ್ ರಿಲೇ಼ಷನ್ ಮ್ಯಾನೇಜರ್ ಸಿದ್ದರಾಜು(28) ಬಂಧಿತ ಸಿಬ್ಬಂದಿಗಳು. ಸಾಲ ವಸೂಲಿಗೆ ಬಂದಾಗ ಸಾಲಗಾರರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಗಳನ್ನ ಬಂಧಿಸಲಾಗಿದೆ.
ಕಳೆದಎರಡು ದಿನಗಳ ಹಿಂದೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ ಎಂಬ ಮಹಿಳೆ ಹಾಗೂ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಮೃತರ ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ ಪ್ರಕರಣ ದಾಖಲು ಮಾಡಲಾಗಿತ್ತು
ಪ್ರಕರಣ ದಾಖಲಿಸಿಕೊಂಡ ಹುಲ್ಲಹಳ್ಳಿ ಪೊಲೀಸರು ನಾಲ್ಕು ಫೈನಾನ್ಸ್ ಕಂಪನಿ ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.ಧರ್ಮಸ್ಥಳ ಸ್ತ್ರೀ ಶಕ್ತಿ ಸಂಘದ ಮೇಲೂ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಪ್ರಕರಣ ದಾಖಲಾದಾಗ ಮುಖ್ಯಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ.
ಆದ್ರೆ ಇಲ್ಲಿ ಕೇವಲ ಸಿಬ್ಬಂದಿಗಳನ್ನ ಮಾತ್ರ ಬಂಧಿಸಿರುವುದು ಕೆಲವು ಅನುಮಾನಗಳನ್ನ ಹುಟ್ಟಿಹಾಕಿದಂತಾಗಿದೆ.
ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಜನರ ಜೀವನ್ಮರಣದ ಜೊತೆ ಚೆಲ್ಲಾಟವಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಮೇಲೂ ಕಾನೂನು ಕ್ರಮ ಜರುಗಿಸಿ ಅವರಿಂದ ಸತ್ತವರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಿಸಿಕೊಡಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago