Categories: CrimeLatest

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ ಪೊಲೀಸರನ್ನೇ ಬೆಚ್ಚಿಬೀಳಿಸಿದೆ. ರೈಲಿನ ಸೂಟ್‌ಕೇಸ್‌ನಲ್ಲಿ ಪತ್ತೆಯಾದ ಮಾನವ ದೇಹದ ತುಂಡುಗಳ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಈ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ.

ರೈಲಿನಲ್ಲಿ ದುರ್ವಾಸನೆ; ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು

ಆಗಸ್ಟ್ 5ರಂದು ಚೆನ್ನೈನಿಂದ ದೆಹಲಿಗೆ ತೆರಳುತ್ತಿದ್ದ ತಮಿಳುನಾಡು ಎಕ್ಸ್‌ಪ್ರೆಸ್ ರೈಲು ಆಗ್ರಾ ರೈಲ್ವೆ ನಿಲ್ದಾಣ ತಲುಪಿತ್ತು. ಈ ವೇಳೆ ಜನರಲ್ ಬೋಗಿಯಲ್ಲಿ ತೀವ್ರ ದುರ್ವಾಸನೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಪರಿಶೀಲನೆ ನಡೆಸಿದಾಗ ಕೆಂಪು ಬಣ್ಣದ ಸೂಟ್‌ಕೇಸ್ ಪತ್ತೆಯಾಗಿದ್ದು, ಅದರೊಳಗೆ ಮಾನವ ದೇಹದ ತುಂಡುಗಳು ಕಂಡುಬಂದಿವೆ. ತನಿಖೆ ಮುಂದುವರಿಸಿದಾಗ ಸೂಟ್‌ಕೇಸ್ ಚೆನ್ನೈನಿಂದ ರೈಲಿನಲ್ಲಿ ಸಾಗಿಸಲಾಗಿತ್ತು ಎಂಬುದು ಪೊಲೀಸರಿಗೆ ತಿಳಿದುಬಂದಿದೆ.

350ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳ ಪರಿಶೀಲನೆ

ಆಗ್ರಾ ಪೊಲೀಸರಿಂದ ಮಾಹಿತಿ ಪಡೆದ ಚೆನ್ನೈ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಸುಮಾರು 350ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು, ಒಬ್ಬ ಪುರುಷ ಮತ್ತು ಮಹಿಳೆ ಕೆಂಪು ಸೂಟ್‌ಕೇಸ್ ಅನ್ನು ರೈಲಿನಲ್ಲಿ ಇರಿಸಿರುವುದನ್ನು ಪತ್ತೆಹಚ್ಚಿದ್ದಾರೆ.

ನಂತರ ಅವರು ಲೋಕಲ್ ರೈಲಿನಲ್ಲಿ ಗೂಡುವಾಂಜೇರಿ ಪ್ರದೇಶಕ್ಕೆ ತೆರಳಿರುವ ಸುಳಿವು ಪೊಲೀಸರಿಗೆ ಸಿಕ್ಕಿದೆ.

ಬಾಡಿಗೆ ಮನೆಯಲ್ಲಿ ಮತ್ತೊಂದು ಆಘಾತಕಾರಿ ದೃಶ್ಯ

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳು ವಾಸಿಸುತ್ತಿದ್ದ ಬಾಡಿಗೆ ಮನೆಗೆ ತೆರಳಿದ್ದಾರೆ. ಬಾಗಿಲು ಮುರಿದು ಒಳಗೆ ಪ್ರವೇಶಿಸಿದಾಗ ಮನೆಯೊಳಗಿನ ದೃಶ್ಯ ಪೊಲೀಸರನ್ನೇ ಬೆಚ್ಚಿಬೀಳಿಸಿದೆ ಎನ್ನಲಾಗಿದೆ.

ಮನೆಯೊಂದರಲ್ಲಿ ಬಿರಿಯಾನಿ ಪಾತ್ರೆ ಪತ್ತೆಯಾಗಿದ್ದು, ಅದರೊಳಗೆ ಅನ್ನದೊಂದಿಗೆ ಮಾನವ ದೇಹದ ಮಾಂಸದ ತುಂಡುಗಳು ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯ ವಿವಿಧೆಡೆ ರಕ್ತದ ಕಲೆಗಳೂ ಪತ್ತೆಯಾಗಿವೆ.

ಹತ್ಯೆಗೀಡಾದ ಮಹಿಳೆಯನ್ನು ಹಯಾತ್ ನಿಶಾ ಎಂದು ಗುರುತಿಸಲಾಗಿದೆ. ಒಡಿಶಾ ಮೂಲದ ಮಾಣಿಕ್ ಉತ್ತಿನ್ ಲಸ್ಕರ್ ಹಾಗೂ ಆತನ ಪತ್ನಿ ಭಾಗಮತಿ ಮಾಜಿಕ್ ಈ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸರು ಬಿರಿಯಾನಿ ಪಾತ್ರೆ ಸೇರಿದಂತೆ ಹಲವು ಸಾಕ್ಷ್ಯಗಳನ್ನು ವಶಕ್ಕೆ ಪಡೆದು ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಹಿಳೆಯ ತಲೆಯ ಭಾಗಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

ಈ ಭೀಕರ ಹತ್ಯೆಯ ಹಿಂದಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಎರಡು ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 hour ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 hour ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 hour ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 hour ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

1 hour ago

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago