Categories: CrimeLatest

ಗಂಡ-ಮಗನನ್ನೇ ಮನೆಯಿಂದ ಆಚೆ ಕಳಿಸಿ ದೌರ್ಜನ್ಯ; ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ನಿರಂತರ ಅತ್ಯಾಚಾರ!

ಪೂಜೆ ಮತ್ತು ದೀಕ್ಷೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಯು ವಾಮಾಚಾರ ಮಾಡುವ ಬೆದರಿಕೆ ನೀಡಿ, ಮಹಿಳೆಯ ಗಂಡ ಮತ್ತು ಮಗನ ಜೀವಕ್ಕೆ ಅಪಾಯ ಉಂಟುಮಾಡುವುದಾಗಿ ಹೆದರಿಸಿ ಈ ಕೃತ್ಯಗಳನ್ನು ನಡೆಸಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ತರಬೇತಿ ಕೇಂದ್ರ ನಡೆಸುತ್ತಿರುವ ಮಹಿಳೆಗೆ, ತನ್ನ ಸಹೋದರಿಯ ಪ್ರವೇಶ ವಿಚಾರದಲ್ಲಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದನು. ನಂತರ ಮಹಿಳೆಯ ಆರ್ಥಿಕ ಸ್ಥಿತಿ ಸುಧಾರಣೆಗೆ ಪೂಜೆ ಮಾಡಬೇಕೆಂದು ನಂಬಿಸಿ, ಅವಳನ್ನು ತನ್ನ ಪ್ರಭಾವಕ್ಕೆ ಒಳಪಡಿಸಿದ್ದಾನೆ.

2025ರ ಜನವರಿ 30ರಂದು ರಾಮನಗರ ಜಿಲ್ಲೆಯ ಪಿರಮಿಡ್ ವ್ಯಾಲಿಗೆ ಕರೆದುಕೊಂಡು ಹೋಗಿ, ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಾದ ಬಳಿಕ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗಾಗಿ ಕರೆದುಕೊಂಡು ಹೋಗಿ, ಮರಳುವ ವೇಳೆ ಕಾರಿನಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ಯಾರಿಗೂ ಹೇಳದಂತೆ, ಕುಟುಂಬದ ಮೇಲೆ ಮಾಟ-ಮಂತ್ರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದ ಆರೋಪಿಯು, ಗಂಡ ಮತ್ತು ಮಗನನ್ನು ಹೊರಗೆ ಕಳುಹಿಸಿ, ಮತ್ತೆ ದೌರ್ಜನ್ಯ ಎಸಗಿದ್ದಾನೆ. ತನ್ನ ಮಾತು ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಜೀವಭೀತಿಯನ್ನೂ ಹುಟ್ಟಿಸಿದ್ದಾನೆ.

ಆರೋಪಿಯ ಕಾಟ ತಾಳಲಾರದೆ, ಮಹಿಳೆ ಕೊನೆಗೂ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆದರೆ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಆರೋಪಿ ಪರಾರಿಯಾಗಿದ್ದು, ಪೊಲೀಸರು ಅವನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

22 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago