Latest

ಪತ್ನಿಯ ದೂರು ಭೀತಿಯಿಂದ ಪೊಲೀಸ್ ಠಾಣೆ ಎದುರು ಪತಿಯ ಆತ್ಮಹತ್ಯೆ ಯತ್ನ

ಮಧ್ಯಪ್ರದೇಶದ:  ಭೋಪಾಲ್‌ನ ಗೌತಮ್ ನಗರ ಪೊಲೀಸ್ ಠಾಣೆಯ ಬಳಿ ಶುಕ್ರವಾರ ಭಯಾನಕ ಘಟನೆ ನಡೆದಿದೆ. ತನ್ನ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ ಎಂಬ ಭಯದಿಂದ 30 ವರ್ಷದ ಸೂರಜ್ ಗಯಾಸಿ ಎಂಬಾತ ಪೆಟ್ರೋಲ್ ಸುರಿದು ತನ್ನ ದೇಹಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದನು. ಘಟನೆ ತಕ್ಷಣವೇ ನಡೆದಿರುವುದರಿಂದ ಠಾಣೆಯ ಸಿಬ್ಬಂದಿ ಸಮಯಕಾಲದಲ್ಲಿ ಬೆಂಕಿ ನಂದಿಸಿ ಸೂರಜ್‌ನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪೊಲೀಸರ ಪ್ರಕಾರ, ಟಿಕಮ್‌ಗಢದ ಮೂಲದ ಸೂರಜ್ ತನ್ನ ಪತ್ನಿಯ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದ. ಕೆಲ ದಿನಗಳ ಹಿಂದೆ ಪತ್ನಿ ತನ್ನ ಪತಿಯ ವಿರುದ್ಧ ಹಲ್ಲೆಯ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲೇ ಶುಕ್ರವಾರ ಮತ್ತೆ ದಂಪತಿ ಜಗಳ ಮಾಡಿಕೊಂಡರು. ನಂತರ ಪತ್ನಿ ಪೊಲೀಸ್ ಠಾಣೆಗೆ ತೆರಳಿದಾಗ, ಸೂರಜ್ ಹಿಂಬಾಲಿಸಿ ಹೋಗಿ ಬೆಂಕಿ ಹಚ್ಚಿಕೊಂಡ.

ಸೂರಜ್‌ ಪತ್ನಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ಜಗಳವಾಡುತ್ತಿದ್ದ ಎಂಬ ಮಾಹಿತಿ ಹೊರಬಂದಿದೆ. ಈ ದಂಪತಿಗೆ ಎಂಟು ಮತ್ತು ಐದು ವರ್ಷ ವಯಸ್ಸಿನ ಇಬ್ಬರು ಮಕ್ಕಳು ಇದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

19 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago