ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ ಮಹಿಳೆಯೊಂದಿಗಿಳಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬಳಿಕ ದಂಪತಿಗೆ ಮೂರು ಮಕ್ಕಳು ಕೂಡ ಜನಿಸಿದರು.
ಆದರೆ, ಸಮಯ ಕಳೆದಂತೆ ಯಲ್ಲಪ್ಪನ ನಿಜವಾದ ಬಣ್ಣ ಬಹಿರಂಗವಾಯಿತು. ಮೂರು ಮಕ್ಕಳ ತಂದೆಯಾಗಿರುವ ಯಲ್ಲಪ್ಪ, ಇದೀಗ ಮತ್ತೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಪತಿ ತೊರೆದು ಹೋದ ನಂತರ, ಮೊದಲ ಪತ್ನಿ ಸಂಕಷ್ಟದಲ್ಲಿ ಮುಳುಗಿದ್ದಾಳೆ. ಜೀವನ ಸಾಗಿಸೋದು ಮಾತ್ರವಲ್ಲ, ಮಕ್ಕಳಿಗೆ ಶಿಕ್ಷಣ ನೀಡುವುದು ಕೂಡಾ ಅವಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ನಡುವೆ, ಅಪಘಾತಕ್ಕೊಳಗಾದ ಮೊದಲ ಪತ್ನಿಗೆ ಆರೋಗ್ಯ ಸಮಸ್ಯೆಗಳೂ ಎದುರಾಗಿವೆ. ಆರ್ಥಿಕ ತೊಂದರೆ ಎದುರಿಸುತ್ತಾ, ಮಕ್ಕಳ ಭವಿಷ್ಯಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಈ ಮಹಿಳೆ, ರೈಲ್ವೆ ನಿಲ್ದಾಣದಲ್ಲಿ ಪಾವ್ ಬಜಿ ಹಾಗೂ ಚಹಾ ಮಾರುವ ಮೂಲಕ ಜೀವನ ಸಾಗಿಸುತ್ತಿದ್ದಳು. ಆದರೆ ಈಗ, ಭಾರವಾದ ಕೆಲಸ ಮಾಡುವುದು ಕಷ್ಟವಾಗಿರುವ ಕಾರಣ, ಪತಿ ತಾನು ಹಾಗೂ ಮಕ್ಕಳನ್ನು ತೊರೆದು ಹೋದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾಳೆ.
ಈಕೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ನ್ಯಾಯ ದೊರಕಬೇಕೆಂಬುದು ಆಕೆಯ ಅಪೇಕ್ಷೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…