ದಾವಣಗೆರೆ: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಸಾವಿಗೆ ಕಾರಣನಾದ ಆರೋಪ ಕೇಳಿಬಂದಿದ್ದು, ಮೃತದೇಹವನ್ನು ಪೊಲೀಸ್ ಠಾಣೆ ಬಳಿಯ ರಸ್ತೆಯಲ್ಲಿ ಬಿಟ್ಟು ಆರು ದಿನದ ಹಸುಗೂಸು ಹಾಗೂ ಮೂರು ವರ್ಷದ ಮಗಳೊಂದಿಗೆ ಪರಾರಿಯಾಗಿರುವ ಮನಕಲಕುವ ಘಟನೆ ದಾವಣಗೆರೆ ತಾಲೂಕಿನ ಬೇತೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬಸಮ್ಮ (25) ಎಂದು ಗುರುತಿಸಲಾಗಿದೆ. ನಾಲ್ಕೈದು ವರ್ಷಗಳ ಹಿಂದೆ ಬಸಮ್ಮ ಹಾಗೂ ನಿಂಗರಾಜ್ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಇಬ್ಬರ ಜಾತಿ ಬೇರೆಬೇರೆಯಾಗಿದ್ದರೂ ಕುಟುಂಬಸ್ಥರು ಅವರ ಪ್ರೀತಿಗೆ ಒಪ್ಪಿಗೆ ನೀಡಿ ಮದುವೆ ಮಾಡಿಸಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದ್ದು, ಇತ್ತೀಚೆಗೆ ಬಸಮ್ಮ ಎರಡನೇ ಬಾರಿಗೆ ಗರ್ಭಿಣಿಯಾಗಿದ್ದರು.
ತುಂಬು ಗರ್ಭಿಣಿಗೆ ಹಲ್ಲೆ ಆರೋಪ
ಮೃತಳ ಕುಟುಂಬಸ್ಥರ ಆರೋಪದ ಪ್ರಕಾರ, ತುಂಬು ಗರ್ಭಿಣಿಯಾಗಿದ್ದ ಬಸಮ್ಮಳೊಂದಿಗೆ ನಿಂಗರಾಜ್ ಆಗಾಗ್ಗೆ ಜಗಳವಾಡುತ್ತಿದ್ದ. ಕೆಲ ದಿನಗಳ ಹಿಂದೆ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದ ವೇಳೆ ಆಕೆಯ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಬಸಮ್ಮಳನ್ನು ಮೊದಲು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಕೋಮಾದಲ್ಲೇ ಮಗುವಿಗೆ ಜನ್ಮ
ಕಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸಮ್ಮ ಕೋಮಾ ಸ್ಥಿತಿಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಸುಮಾರು ಎಂಟು ದಿನಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆಕೆ, ತನ್ನ ಮಗುವಿನ ಮುಖವನ್ನೂ ನೋಡಲಾಗದೆ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪೊಲೀಸ್ ಠಾಣೆ ಬಳಿಯೇ ಶವ ಬಿಟ್ಟು ಪರಾರಿ
ಬಸಮ್ಮ ಮೃತಪಟ್ಟ ಬಳಿಕ ಆಕೆಯ ಮೃತದೇಹವನ್ನು ಆಸ್ಪತ್ರೆಯಿಂದ ತರಲಾಗಿದ್ದು, ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ಸಮೀಪದ ರಸ್ತೆಯಲ್ಲಿ ಬಿಟ್ಟು ನಿಂಗರಾಜ್ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಆರು ದಿನದ ಹಸುಗೂಸು ಹಾಗೂ ಮೂರು ವರ್ಷದ ಮಗಳನ್ನೂ ತನ್ನೊಂದಿಗೆ ಕರೆದೊಯ್ದಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಬಸಮ್ಮಳ ತವರು ಮನೆಯವರು ಕಣ್ಣೀರಿಡುತ್ತಾ ಮೃತದೇಹವನ್ನು ನಿಂಗರಾಜ್ ಮನೆ ಮುಂದೆ ಕೊಂಡೊಯ್ದಿದ್ದಾರೆ. ಗಂಡ ಬರುವ ನಿರೀಕ್ಷೆಯಲ್ಲಿ ಎರಡು ದಿನ ಕಾದರೂ ಆತ ಪತ್ತೆಯಾಗದ ಹಿನ್ನೆಲೆಯಲ್ಲಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಳಿಕ ಬಸಮ್ಮಳ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇತ್ತ ತಾಯಿಯನ್ನು ಕಳೆದುಕೊಂಡ ಆರು ದಿನದ ಹಸುಗೂಸು ಹಾಗೂ ಮೂರು ವರ್ಷದ ಮಗುವಿನ ಸ್ಥಿತಿ ಕುಟುಂಬಸ್ಥರಲ್ಲಿ ಆತಂಕ ಮೂಡಿಸಿದೆ. ನಿಂಗರಾಜ್ ಹಾಗೂ ಮಕ್ಕಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಮುಂಬೈ: ಬಾಲಿವುಡ್‌ನ ಫಿಟ್ನೆಸ್ ಹಾಗೂ ಫ್ಯಾಷನ್ ಐಕಾನ್ ಮಲೈಕಾ ಅರೋರಾ ತಮ್ಮ ವೈಯಕ್ತಿಕ ಜೀವನದ ವಿಚಾರವಾಗಿಯೂ ಆಗಾಗ್ಗೆ ಸುದ್ದಿಯಾಗುತ್ತಾರೆ. ಇದೀಗ…
ಚಂದ್ರಗಿರಿ (ತಿರುಪತಿ): ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಬೈಕ್‌ಗೆ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಲಾಗಿದ್ದ ಪ್ರಕರಣವೊಂದು ತನಿಖೆಯ ಬಳಿಕ ಬೇರೆಯದೇ ತಿರುವು…
ಬಾಗಲಕೋಟೆ: ಬಡ ಹಾಗೂ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳು…
ಪ್ರವಾಸಕ್ಕೆಂದು ಹೋಗಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಹೋಟೆಲ್‌ನಲ್ಲಿ ಯುವತಿಯೊಬ್ಬಳ ಮೋಸದ ಜಾಲಕ್ಕೆ ಸಿಲುಕಿ ಹಣ ಹಾಗೂ ಚಿನ್ನ ಕಳೆದುಕೊಂಡಿರುವ ಘಟನೆ…
ಹಾವೇರಿ: ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಕೆಲಸ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಅಧಿಕಾರಿಯೊಬ್ಬರು ಲೋಕಾಯುಕ್ತ…
ನವದೆಹಲಿ: ತನ್ನ ಪ್ರಿಯಕರ ಮತ್ತೊಬ್ಬ ಮಹಿಳೆಯೊಂದಿಗೆ ತೆರಳಿದ್ದಾನೆ ಎಂದು ಆರೋಪಿಸಿ ದೆಹಲಿ ಮೂಲದ ಖ್ಯಾತ ಬ್ಲಾಗರ್ ಶ್ವೇತಾ ದ್ವಿವೇದಿ ಸಾಮಾಜಿಕ…