ಸಾಮಾನ್ಯವಾಗಿ ದಾಂಪತ್ಯ ಜೀವನದಲ್ಲಿ ಅಕ್ರಮ ಸಂಬಂಧಗಳ ವಿಚಾರ ಹೊರಬಂದಾಗ ಜಗಳ, ಕಲಹ, ಪೊಲೀಸ್ ಪ್ರಕರಣಗಳು ಅಥವಾ ದುರಂತ ಘಟನೆಗಳೇ ಹೆಚ್ಚು ಕೇಳಿಬರುತ್ತವೆ. ಆದರೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಘಟನೆಯೊಂದು ಎಲ್ಲರನ್ನೂ ಅಚ್ಚರಿಗೊಳಿಸಿದೆ. ತನ್ನ ಪತ್ನಿ ಮತ್ತೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬುದು ತಿಳಿದ ಪತಿಯೊಬ್ಬ, ಕೋಪಗೊಳ್ಳದೇ ಸ್ವತಃ ಆಕೆಯ ಮದುವೆಯನ್ನೇ ಮಾಡಿಸಿದ ಘಟನೆ ಚರ್ಚೆಗೆ ಗ್ರಾಸವಾಗಿದೆ.
ಗ್ರಾಮದ ದೇವಸ್ಥಾನಕ್ಕೆ 22 ವರ್ಷದ ಯುವಕನೊಬ್ಬ ಪೂಜಾರಿಯಾಗಿ ಬಂದಿದ್ದನು. ದೇವಸ್ಥಾನದ ಸಮೀಪದಲ್ಲೇ 40 ವರ್ಷದ ಮಹಿಳೆಯೊಬ್ಬಳು ತನ್ನ ಕುಟುಂಬದೊಂದಿಗೆ ವಾಸವಾಗಿದ್ದಳು. ಆಕೆಗೆ ಮೂವರು ಮಕ್ಕಳಿದ್ದಾರೆ ಎನ್ನಲಾಗಿದೆ. ದೇವಸ್ಥಾನಕ್ಕೆ ಆಗಾಗ್ಗೆ ತೆರಳುತ್ತಿದ್ದ ಮಹಿಳೆ ಮತ್ತು ಯುವ ಪೂಜಾರಿಯ ನಡುವೆ ಪರಿಚಯ ಬೆಳೆದು, ನಂತರ ಅದು ಪ್ರೇಮ ಸಂಬಂಧಕ್ಕೆ ತಿರುಗಿದೆ ಎಂದು ಹೇಳಲಾಗುತ್ತಿದೆ.
ಒಂದು ರಾತ್ರಿ ಮಹಿಳೆಯ ಪತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಯುವ ಪೂಜಾರಿ ಆಕೆಯ ಮನೆಗೆ ಬಂದಿದ್ದನು. ಇದನ್ನು ಗಮನಿಸಿದ ಗ್ರಾಮಸ್ಥರು ಇಬ್ಬರನ್ನೂ ಹಿಡಿದು ದೇವಸ್ಥಾನದ ಎದುರಿನ ಮರಕ್ಕೆ ಕಟ್ಟಿ ಪ್ರಶ್ನಿಸಿದ್ದಾರೆ. ಬಳಿಕ ವಿಷಯ ತಿಳಿದು ಮಹಿಳೆಯ ಪತಿ ಸ್ಥಳಕ್ಕೆ ಆಗಮಿಸಿದ್ದಾನೆ.
ಆದರೆ ಎಲ್ಲರೂ ನಿರೀಕ್ಷಿಸಿದಂತೆ ಆತ ಗಲಾಟೆ ಮಾಡಲಿಲ್ಲ. ಬದಲಾಗಿ ಶಾಂತವಾಗಿ ಮಾತನಾಡಿದ ಪತಿ, “ಇವರಿಬ್ಬರೂ ನಿಜವಾಗಿಯೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರೆ ಮದುವೆ ಮಾಡಿಸಿ ಬಿಡಿ. ನನಗೆ ಯಾವುದೇ ವಿರೋಧವಿಲ್ಲ. ನನ್ನ ಮಕ್ಕಳ ಜವಾಬ್ದಾರಿಯನ್ನು ನಾನು ನೋಡಿಕೊಳ್ಳುತ್ತೇನೆ. ನಂತರ ನಾನು ನನ್ನ ಜೀವನವನ್ನು ಬೇರೆ ರೀತಿಯಲ್ಲಿ ಮುಂದುವರಿಸುತ್ತೇನೆ” ಎಂದು ಹೇಳಿದ್ದಾನೆ ಎನ್ನಲಾಗಿದೆ.
ಪತಿಯ ಈ ನಿರ್ಧಾರ ಗ್ರಾಮಸ್ಥರನ್ನೇ ಬೆಚ್ಚಿಬೀಳುವಂತೆ ಮಾಡಿದ್ದು, ಬಳಿಕ ಇಬ್ಬರಿಗೂ ಮದುವೆ ಮಾಡಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳಲ್ಲಿ ಉಲ್ಲೇಖಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರು ವಿಭಿನ್ನ ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಪತಿಯ ನಿರ್ಧಾರವನ್ನು ಪ್ರಾಯೋಗಿಕ ಎಂದು ಹೊಗಳುತ್ತಿದ್ದರೆ, ಇನ್ನೂ ಕೆಲವರು ಇದೊಂದು ವಿಚಿತ್ರ ಘಟನೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…