Categories: CrimeLatest

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್ ಕುಮಾರ್ (24) ವಿಚಾರಣೆಯ ವೇಳೆ ನೀಡಿರುವ ಹೇಳಿಕೆಯಲ್ಲಿ ಹಲವು ಅಚ್ಚರಿಯ ಸಂಗತಿಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಬಿಹಾರ ಮೂಲದ ಧೀರಜ್ ಕುಮಾರ್ ಮತ್ತು ರೀಮಾ ಪರಸ್ಪರ ಪ್ರೀತಿಸಿ ಸುಮಾರು ಹತ್ತು ತಿಂಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದರು. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಬಳಿಕ ಇಬ್ಬರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದವು ಎನ್ನಲಾಗಿದೆ.

ವಿಚಾರಣೆಯಲ್ಲಿ ಆರೋಪಿ, ಪತ್ನಿ ಹೆಚ್ಚಿನ ಸಮಯವನ್ನು ಮೊಬೈಲ್‌ನಲ್ಲಿ ರೀಲ್ಸ್ ಮಾಡುವುದರಲ್ಲಿ ಕಳೆಯುತ್ತಿದ್ದರು. ಮನೆ ಕೆಲಸ ಹಾಗೂ ದಾಂಪತ್ಯ ಜೀವನದ ಕಡೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಅಲ್ಲದೆ ಆಗಾಗ ಬಿಹಾರಕ್ಕೆ ಹಿಂದಿರುಗುವುದಾಗಿ ಹೇಳುತ್ತಿದ್ದರು ಎಂದು ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇದೇ ವಿಚಾರವಾಗಿ ದಂಪತಿ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಜುಲೈ 25ರಂದು ಕೆಲಸ ಮುಗಿಸಿ ಮನೆಗೆ ಬಂದಾಗ ಊಟ ಸಿದ್ಧವಾಗಿರಲಿಲ್ಲ. ಇದರಿಂದ ಮಾತಿನ ಚಕಮಕಿ ಆರಂಭವಾಗಿ ವಾಗ್ವಾದ ತೀವ್ರಗೊಂಡಿತು. ಈ ವೇಳೆ ಪತ್ನಿ ತನ್ನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದರು ಎಂದು ಆರೋಪಿ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಕೋಪದ ಭರದಲ್ಲಿ ಆರೋಪಿ ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿ, ಬಳಿಕ ಮೃತದೇಹದ ಮುಖಕ್ಕೆ ಪ್ಲಾಸ್ಟಿಕ್ ಸುತ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವಿಚಾರಣೆಯಲ್ಲಿ ಬಹಿರಂಗವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಬಿಹಾರಕ್ಕೆ ಪರಾರಿಯಾಗಿದ್ದ ಆರೋಪಿಯನ್ನು ತಾಂತ್ರಿಕ ಮಾಹಿತಿ ಆಧರಿಸಿ ಪತ್ತೆಹಚ್ಚಿದ ಕುಂಬಳಗೋಡು ಪೊಲೀಸರು, ಬಿಹಾರದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

10 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

15 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago