Categories: CrimeLatest

ಪ್ರಿಯಕರನ ಜೊತೆ ಸೇರಿ ಹಾವು ಕಚ್ಚಿಸಿ ಗಂಡನ ಹತ್ಯೆ?; ಕೆಲಸ ಉಳಿಸಿಕೊಳ್ಳಲು ರೂಪಿಸಿದ್ದ ಸಂಚು ಬಯಲು!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಹಸ್ತಿನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಶಾಲಾ ಪ್ರಾಂಶುಪಾಲರ ಸಾವಿನ ಪ್ರಕರಣಕ್ಕೆ ಇದೀಗ ಬೆಚ್ಚಿಬೀಳಿಸುವ ತಿರುವು ಸಿಕ್ಕಿದೆ. ಆರಂಭದಲ್ಲಿ ಹಾವು ಕಡಿತದಿಂದ ಸಂಭವಿಸಿದ ಸಹಜ ಸಾವು ಎಂದು ಭಾವಿಸಲಾಗಿದ್ದ ಪ್ರಕರಣ, ಈಗ ಪತ್ನಿ ಮತ್ತು ಆಕೆಯ ಪ್ರಿಯಕರ ಸೇರಿ ರೂಪಿಸಿದ ಸಂಚಿನ ಕೊಲೆ ಎಂಬ ಆರೋಪಕ್ಕೆ ತಿರುಗಿದೆ.

ಮೃತ ಅತುಲ್ ಕುಮಾರ್ ಖಾಸಗಿ ಶಾಲೆಯ ಆಡಳಿತ ನಡೆಸುತ್ತಿದ್ದು, ಅವರ ಪತ್ನಿ ದಾಮಿನಿ ಅದೇ ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದರು. ಶಾಲೆಯ ಬಸ್ ಚಾಲಕರಾಗಿದ್ದ ತುಷಾರ್ ಎಂಬಾತನೊಂದಿಗೆ ದಾಮಿನಿಗೆ ಅಕ್ರಮ ಸಂಬಂಧವಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧದ ಬಗ್ಗೆ ಅತುಲ್ ಕುಮಾರ್‌ಗೆ ಮಾಹಿತಿ ದೊರೆತಿದ್ದು, ತುಷಾರ್‌ನನ್ನು ಕೆಲಸದಿಂದ ವಜಾಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ.

ಕೆಲಸ ಕಳೆದುಕೊಳ್ಳುವ ಭೀತಿ ಹಾಗೂ ತಮ್ಮ ಸಂಬಂಧ ಬಹಿರಂಗವಾಗುವ ಆತಂಕದಿಂದ ದಾಮಿನಿ ಮತ್ತು ತುಷಾರ್ ಅತುಲ್ ಕುಮಾರ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಅಪಘಾತದ ಯತ್ನ, ಬಳಿಕ ಹಾವನ್ನೇ ಆಯುಧವನ್ನಾಗಿಸಿದ ಆರೋಪ

ಪೊಲೀಸರ ಮಾಹಿತಿ ಪ್ರಕಾರ, ಆರೋಪಿಗಳು ಮೊದಲು ರಸ್ತೆ ಅಪಘಾತದ ಮೂಲಕ ಅತುಲ್ ಕುಮಾರ್ ಅವರನ್ನು ಕೊಲ್ಲಲು ಯತ್ನಿಸಿದ್ದರು. ಆದರೆ ಆ ಯೋಜನೆ ವಿಫಲವಾಗಿತ್ತು. ಬಳಿಕ ಹಾವು ಕಡಿತದಿಂದ ಮೃತಪಟ್ಟ ಮತ್ತೊಂದು ಘಟನೆಯಿಂದ ಪ್ರೇರಿತರಾಗಿ, ಕೊಲೆಯನ್ನು ಸಹಜ ಹಾವು ಕಡಿತದಂತೆ ತೋರಿಸುವ ಯೋಜನೆ ರೂಪಿಸಿದ್ದರು ಎನ್ನಲಾಗಿದೆ.

ಯೋಜನೆಯಂತೆ, ದಾಮಿನಿ ಪತಿಗೆ ಕುಡಿಯುವ ಹಾಲಿನಲ್ಲಿ ನಿದ್ದೆ ಮಾತ್ರೆ ಬೆರೆಸಿ ನೀಡಿದ್ದಳು. ಅತುಲ್ ಕುಮಾರ್ ಗಾಢ ನಿದ್ರೆಗೆ ಜಾರಿದ ಬಳಿಕ ಮಕ್ಕಳನ್ನು ಬೇರೆ ಕೋಣೆಗೆ ಕಳುಹಿಸಿ, ತುಷಾರ್ ತಂದಿದ್ದ ವಿಷಪೂರಿತ ಹಾವನ್ನು ಹಾಸಿಗೆಯ ಮೇಲೆ ಬಿಟ್ಟಿದ್ದರು. ಹಾವು ಕಡಿತದಿಂದ ಅತುಲ್ ಕುಮಾರ್ ಮೃತಪಟ್ಟಿದ್ದು, ಇದನ್ನು ಸಹಜ ಅಪಘಾತ ಎಂದು ಬಿಂಬಿಸಲು ಇಬ್ಬರೂ ಪ್ರಯತ್ನಿಸಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಗೂಗಲ್‌ನಲ್ಲಿ ಕೊಲೆ ವಿಧಾನಗಳ ಹುಡುಕಾಟ!

ಪ್ರಕರಣದ ತನಿಖೆ ವೇಳೆ ಆರೋಪಿಗಳು ಗೂಗಲ್‌ನಲ್ಲಿ ವಿವಿಧ ಕೊಲೆ ವಿಧಾನಗಳ ಕುರಿತು ಮಾಹಿತಿ ಹುಡುಕಿದ್ದರೆಂಬುದು ಪೊಲೀಸರ ಗಮನಕ್ಕೆ ಬಂದಿದೆ. ಈ ಡಿಜಿಟಲ್ ಸಾಕ್ಷ್ಯಗಳು ತನಿಖೆಗೆ ಮಹತ್ವದ ಸುಳಿವು ನೀಡಿವೆ.

ಪ್ರಸ್ತುತ ದಾಮಿನಿ ಮತ್ತು ತುಷಾರ್ ಅವರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

ಈ ಘಟನೆ ಹಸ್ತಿನಾಪುರ ಪ್ರದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಶಾಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಆಘಾತ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ನ್ಯಾಯಾಲಯದ ವಿಚಾರಣೆ ವೇಳೆ ಇನ್ನಷ್ಟು ಸತ್ಯಾಂಶಗಳು ಹೊರಬರುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

12 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

12 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

12 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago