Categories: CrimeLatest

₹2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ: ಮಗಳ ಕೃತ್ಯದಿಂದ ಮನನೊಂದ ತಾಯಿ ಆತ್ಮಹತ್ಯೆ

ಬೆಳಗಾವಿ: ₹2 ಕೋಟಿ ಜೀವ ವಿಮೆ ಹಣಕ್ಕಾಗಿ ಮಾಜಿ ಸೈನಿಕನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಕೊಲೆ ಮಾಡಿದ ಪ್ರಕರಣಕ್ಕೆ ಇದೀಗ ಮತ್ತೊಂದು ದುಃಖಕರ ತಿರುವು ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಹಿಳೆಯ ತಾಯಿ, ಮಗಳ ಕೃತ್ಯದಿಂದ ಮಾನಸಿಕವಾಗಿ ನಲುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಹಾದೇವಿ ಬದಾಮಿ (57) ಎಂದು ಗುರುತಿಸಲಾಗಿದೆ. ಇವರು ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಆರೋಪಿ ಸುಮಾ ಮಂಜರಗಿ ಅವರ ತಾಯಿ. ಮಗಳ ವಿರುದ್ಧ ಗಂಭೀರ ಆರೋಪಗಳು ಹೊರಬಿದ್ದ ನಂತರ ಮಹಾದೇವಿ ಅವರು ತೀವ್ರ ಆಘಾತಕ್ಕೆ ಒಳಗಾಗಿದ್ದು, ಸಮಾಜದಲ್ಲಿ ಎದುರಾದ ಅವಮಾನ ಹಾಗೂ ಜನರ ಟೀಕೆಗಳಿಂದ ಮನನೊಂದು ಜೀವನ ಅಂತ್ಯಗೊಳಿಸಿರುವುದಾಗಿ ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ಮಾಜಿ ಸೈನಿಕ ಸಂದೀಪ್ ಮಂಜರಗಿ ಅವರನ್ನು ₹2 ಕೋಟಿ ವಿಮೆ ಹಣಕ್ಕಾಗಿ ಪತ್ನಿ ಸುಮಾ ಮತ್ತು ಆಕೆಯ ಪ್ರಿಯಕರ ಸಂಚು ರೂಪಿಸಿ ಕೊಲೆ ಮಾಡಿದ್ದರು ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ತನಿಖೆ ನಡೆಸಿ ಜೂನ್ 14ರಂದು ಸುಮಾಳನ್ನು ಬಂಧಿಸಿದ್ದರು.

ಮಗಳ ಬಂಧನದ ನಂತರ ಮಹಾದೇವಿ ಅವರು ಮಾನಸಿಕವಾಗಿ ಕುಗ್ಗಿಹೋಗಿದ್ದರು. ಊರಿನಲ್ಲಿ ಜನರ ಎದುರು ತಲೆ ಎತ್ತಿ ನಡೆಯಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು ಎನ್ನಲಾಗಿದೆ. ಇದೇ ಬೇಸರದಲ್ಲಿ ಅವರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಯಮಕನಮರಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ದುರ್ಘಟನೆ ಗ್ರಾಮದಲ್ಲಿ ಭಾರೀ ದುಃಖದ ವಾತಾವರಣ ಸೃಷ್ಟಿಸಿದ್ದು, ಒಂದೇ ಕುಟುಂಬದಲ್ಲಿ ನಡೆದ ಎರಡು ಆಘಾತಕಾರಿ ಘಟನೆಗಳು ಜನರನ್ನು ಬೆಚ್ಚಿಬೀಳಿಸಿವೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

39 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago