ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಪತಿ ಹತ್ಯೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದು ಭಾರೀ ಸಂಚಲನ ಮೂಡಿಸಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿರುವ ಆರೋಪ ಕೇಳಿಬಂದಿದೆ.
ನಾರಾಯಣಖೇಡ್ ಮಂಡಲದ ಗಂಗಾಪುರ ಗ್ರಾಮದ ನಿವಾಸಿ ಚೆಂಬನುಳ್ಳ ಮುತ್ಯಂ ರೆಡ್ಡಿ (35) ಮೃತ ವ್ಯಕ್ತಿ. ಬೋರ್ವೆಲ್ ಮೋಟಾರ್ ರಿಪೇರಿ ಕೆಲಸ ಮಾಡುತ್ತಿದ್ದ ಮುತ್ಯಂ ರೆಡ್ಡಿಯ ಪತ್ನಿ ಕಲ್ಪನಾ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಇದೇ ವೇಳೆ ಮನ್ಸೂರ್ ಮಂಡಲದ ಎಲ್ಗೋಯಿ ಗ್ರಾಮದ ಗೌನಿ ಪಂಡರಿ ಎಂಬಾತನೊಂದಿಗೆ ಆಕೆಗೆ ಪರಿಚಯವಾಗಿದ್ದು, ನಂತರ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದ ಹಿನ್ನೆಲೆ, ಆತನನ್ನು ಮುಗಿಸಲು ಕಲ್ಪನಾ ಹಾಗೂ ಪಂಡರಿ ಸಂಚು ರೂಪಿಸಿದ್ದರು ಎನ್ನಲಾಗಿದೆ. ಸುಮಾರು ಒಂಬತ್ತು ದಿನಗಳ ಹಿಂದೆ ಮುತ್ಯಂ ರೆಡ್ಡಿಯನ್ನು ನಾರಾಯಣಖೇಡ್-ರಾಯ್ಪಲ್ಲಿ ರಸ್ತೆಯಲ್ಲಿರುವ ದಾಬಾಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಊಟ ಮಾಡಿಸಿದ್ದರು. ಬಳಿಕ ಎಲ್ಗೋಯಿ ಗ್ರಾಮದ ಹೊರವಲಯದ ಜಮೀನಿಗೆ ಕರೆದೊಯ್ದು ಕೊಲೆ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಯಾರಿಗೂ ಅನುಮಾನ ಬಾರದಂತೆ ಮಾಡಲು “ತಾತನ ಸಮಾಧಿ ನಿರ್ಮಾಣ” ಎಂಬ ನೆಪದಲ್ಲಿ ಮುಂಚಿತವಾಗಿಯೇ ಜೆಸಿಬಿ ಮೂಲಕ ಗುಂಡಿ ತೋಡಿಸಲಾಗಿತ್ತು. ಹತ್ಯೆಯ ಬಳಿಕ ಅದೇ ಗುಂಡಿಯಲ್ಲಿ ಶವವನ್ನು ಹೂತುಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುತ್ಯಂ ರೆಡ್ಡಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಕಲ್ಪನಾಳ ಮೊಬೈಲ್ ಕರೆ ವಿವರಗಳಲ್ಲಿ ಅನುಮಾನಾಸ್ಪದ ಮಾಹಿತಿ ಪತ್ತೆಯಾದ ಕಾರಣ, ಪಂಡರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಆತ ಕೊಲೆ ಮಾಡಿರುವುದನ್ನು ಒಪ್ಪಿಕೊಂಡು, ಶವ ಹೂತಿದ್ದ ಸ್ಥಳವನ್ನೂ ಪೊಲೀಸರಿಗೆ ತೋರಿಸಿದ್ದಾನೆ.
ಮೃತನಿಗೆ ಐದು ವರ್ಷದ ಹೆಣ್ಣು ಮಗಳಿದ್ದು, ಹೆಂಡತಿಯೇ ಗಂಡನ ಹತ್ಯೆಗೆ ಕಾರಣವಾಗಿರುವ ವಿಷಯ ತಿಳಿದು ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪ್ರಕರಣದ ಕುರಿತು ಡಿಎಸ್ಪಿ ವೆಂಕಟ್ ರೆಡ್ಡಿ, ಸಿಐ ಶ್ರೀನಿವಾಸ್ ರೆಡ್ಡಿ ಹಾಗೂ ಎಸ್‌ಐ ಕೋಟೇಶ್ವರರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…