ಹರಿಯಾಣದ ರೇವಾರಿ ಜಿಲ್ಲೆಯಲ್ಲಿ ಪತ್ನಿಯೊಬ್ಬಳು ತನ್ನ ಪ್ರೇಮಿಯೊಂದಿಗೆ ಸೇರಿ ಪತಿಯನ್ನು ಹತ್ಯೆ ಮಾಡಿದ ಆರೋಪದ ಪ್ರಕರಣ ಬೆಳಕಿಗೆ ಬಂದಿದೆ. ಪುಣೆಯಲ್ಲಿ ನಡೆದ ಇದೇ ರೀತಿಯ ಘಟನೆಯ ಬೆನ್ನಲ್ಲೇ ಈ ಪ್ರಕರಣ ಬಹಿರಂಗವಾಗಿದ್ದು, ದಾಂಪತ್ಯ ಸಂಬಂಧಗಳಲ್ಲಿನ ನಂಬಿಕೆ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಎಬ್ಬಿಸಿದೆ.
ಮೃತ ಯುವಕನನ್ನು 21 ವರ್ಷದ ಮೋನು ಎಂದು ಗುರುತಿಸಲಾಗಿದ್ದು, ಆತನ ಪತ್ನಿ ತನು ತನ್ನ ಪ್ರೇಮಿಯೊಂದಿಗೆ ಸೇರಿ ಈ ಕೃತ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾಳೆ. ಪತಿಯ ಸಾವಿನ ಬಳಿಕ ಅಂತಿಮ ಸಂಸ್ಕಾರದವರೆಗೂ ದುಃಖಿತಳಂತೆ ವರ್ತಿಸಿದ್ದ ತನು, ಪೊಲೀಸ್ ತನಿಖೆ ವೇಳೆ ಸಿಕ್ಕಿಬಿದ್ದಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ವೇಳೆ ಮೊಬೈಲ್ ಕರೆಗಳ ವಿವರಗಳು ಪೊಲೀಸರಿಗೆ ಮಹತ್ವದ ಸುಳಿವು ನೀಡಿವೆ. ಹತ್ಯೆ ನಡೆದ ದಿನವೇ ತನು ತನ್ನ ಪ್ರೇಮಿಗೆ ಬರೋಬ್ಬರಿ 49 ಬಾರಿ ಕರೆ ಮಾಡಿರುವುದು ಪತ್ತೆಯಾಗಿದ್ದು, ಬಳಿಕ ಕಾಲ್ ರೆಕಾರ್ಡ್‌ಗಳು ಹಾಗೂ ಇತರ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಹತ್ಯೆಯ ಸಂಚು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…