ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದ ಮಹಿಳೆಯ ಸಾವಿನ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. 23 ವರ್ಷದ ಭಾಗ್ಯಶ್ರೀ ಅಲಿಯಾಸ್ ಪ್ರಗತಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಈ ಪ್ರಕರಣದ ಸುತ್ತ ಹಲವು ಪ್ರಶ್ನೆಗಳು ಮೂಡಿವೆ.
ಮೃತಳ ಪತಿ ಪ್ರವೀಣ ಜಗಿಳೂರು, ಪತ್ನಿಗೆ ಅನೈತಿಕ ಸಂಬಂಧವಿದ್ದ ಶಂಕೆಯಿಂದ ಅದಕ್ಕೆ ಸಂಬಂಧಿಸಿದ ವಿಡಿಯೋವನ್ನು ತೋರಿಸಿದ ಬಳಿಕ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿಕೊಂಡಿದ್ದಾನೆ. ದಂಪತಿಗೆ ಆರು ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಒಬ್ಬ ಗಂಡು ಮಗನಿದ್ದಾನೆ.
ಆದರೆ, ಮಹಿಳೆ ನೇಣು ಬಿಗಿದುಕೊಂಡು ಒದ್ದಾಡುತ್ತಿದ್ದ ಸಂದರ್ಭ ಆಕೆಯನ್ನು ರಕ್ಷಿಸುವ ಬದಲು ಪತಿ ವಿಡಿಯೋ ಚಿತ್ರೀಕರಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಪತಿಯೇ ಕೊಲೆ ಮಾಡಿ ಅದನ್ನು ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ್ದಾನೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ.
ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಮರಣದ ನಿಖರ ಕಾರಣ ಹಾಗೂ ಸತ್ಯಾಂಶಗಳು ತನಿಖೆಯ ಬಳಿಕವೇ ಬಹಿರಂಗವಾಗಬೇಕಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…