ಕಲಬುರಗಿಯಲ್ಲಿ ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಪತ್ನಿಯೊಬ್ಬಳು ಗಂಡನ ಎರಡು ಕಾಲು ಮುರಿಸುವಂತೆ ಸುಪಾರಿ ನೀಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ಕಲಬುರಗಿ ನಗರದ ಅತ್ತರ ಕಾಂಪೌಂಡ್ ಬಳಿಯಾಗಿದೆ.
ವೆಂಕಟೇಶ್ ಎಂಬಾತ ಪರಸ್ತ್ರೀಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರಿಂದ, ಪತ್ನಿ ಉಮಾದೇವಿ ತೀವ್ರ ಕೋಪಗೊಂಡಿದ್ದಳು. ಪತಿಯ ವರ್ತನೆಗೆ ಬೇಸತ್ತಿದ್ದಾಳೆ, ಹೀಗಾಗಿ ಅವನನ್ನು ಸುಮ್ಮನಾಗಿಸಲು ಅವರ ಕಾಲು ಮುರಿಸುವ ಯೋಜನೆ ರೂಪಿಸಿದ್ದಾಳೆ. ಈ ಯೋಜನೆಗಾಗಿ ಆಕೆಯು ಆರಿಫ್, ಮನೋಹರ್, ಮತ್ತು ಸುನೀಲ್ ಎಂಬುವವರಿಗೆ 5 ಲಕ್ಷ ರೂ. ಸುಪಾರಿ ನೀಡಿದ್ದಾಳೆ.
ಯೋಜನೆ ಅನ್ವಯ, ಆರೋಪಿಗಳು ವೆಂಕಟೇಶನ್ನು ಗುರಿಯಾಗಿಸಿ ಅವನ ಎರಡು ಕಾಲುಗಳನ್ನು ಮುರಿದಿದ್ದಾರೆ. ಘಟನೆಯ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಪೊಲೀಸರು ಉಮಾದೇವಿ ಮತ್ತು ಮೂವರು ಸುಪಾರಿ ಕೊಲೆಗಾರರನ್ನು ಬಂಧಿಸಿದ್ದಾರೆ.
ಈ ಪ್ರಕರಣ ಸ್ಥಳೀಯರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪತಿ-ಪತ್ನಿಯ ವೈಯಕ್ತಿಕ ಕಲಹ ಇಷ್ಟು ದೂರ ಹೋಗುವುದು ಗಂಭೀರ ವಿಚಾರವಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…