Latest

ಆನ್‌ಲೈನ್ ಸೀರೆ ಖರೀದಿಯಲ್ಲಿ ಐಎಎಸ್ ಅಧಿಕಾರಿಗೆ ವಂಚನೆ: ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಆನ್‌ಲೈನ್ ಜಾಹೀರಾತು ನೋಡಿ ಸೀರೆ ಖರೀದಿಸಿದ್ದ ಐಎಎಸ್ ಅಧಿಕಾರಿಯೊಬ್ಬರು ವಂಚನೆಯ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಪಲ್ಲವಿ ಅಕುರಾತಿ ಎಂಬವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಪಲ್ಲವಿ ನೀಡಿದ ದೂರಿನ ಪ್ರಕಾರ, ತಮಿಳುನಾಡಿನ ಮದುರೈ ಕಾಟನ್ ಸೀರೆಗಳ ಮಾರಾಟದ ಬಗ್ಗೆ ‘ಪೂರ್ಣಿಮಾ ಕಲೆಕ್ಷನ್’ ಎಂಬ ಸಂಸ್ಥೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ ವಿಡಿಯೋವೊಂದನ್ನು ಅವರು ವೀಕ್ಷಿಸಿದ್ದರು. ಆ ವಿಡಿಯೋ ಆಧರಿಸಿ ಮಾರ್ಚ್ 10ರಂದು ₹850 ಮೊತ್ತವನ್ನು ಗೂಗಲ್ ಪೇ ಮೂಲಕ ಪಾವತಿಸಿ ಸೀರೆಯೊಂದನ್ನು ಬುಕ್ ಮಾಡಿದ್ದರು.

ಆದರೆ, ಪಾವತಿಸಿದ ನಂತರ ಪಲ್ಲವಿ ನೀಡಿದ ವಿಳಾಸಕ್ಕೆ ಸೀರೆ ಬಾರದಂತೆ ಅಲ್ಲದೆ ಹಣವನ್ನೂ ವಾಪಸ್ ಮಾಡಲಾಗಿಲ್ಲ. ಮಾರಾಟದ ಜನರನ್ನು ಸಂಪರ್ಕಿಸಲು ಯತ್ನಿಸಿದರೂ ಕರೆಗಳಿಗೆ ಪ್ರತಿಕ್ರಿಯೆ ಲಭಿಸಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಇದೇ ರೀತಿಯ ವಂಚನೆ ಇನ್ನೂ ಹಲವಾರು ಮಹಿಳೆಯರ ಮೇಲೂ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಪ್ರಕರಣದ ಕುರಿತು ಈಗಾಗಲೇ ತನಿಖೆ ಆರಂಭಿಸಲಾಗಿದೆ.

ಆನ್‌ಲೈನ್ ಖರೀದಿಗಳಲ್ಲಿ ಎಚ್ಚರಿಕೆ ಅಗತ್ಯವಿದೆ ಎಂಬುದನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

17 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago