Categories: CrimeLatestNational

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆತನಿಗೆ ಬಾಡಿಗೆಗೆ ಮನೆ ನೀಡಿದ್ದ ದಾವಣಗೆರೆ ಜಿಲ್ಲೆಯ ಬನ್ನಿಕೋಡು ಗ್ರಾಮದ ಕುಟುಂಬ ಇದೀಗ ತೀವ್ರ ಆಘಾತ ವ್ಯಕ್ತಪಡಿಸಿದೆ.

ಮನೆ ಮಾಲೀಕರಾದ ರೇಣುಕಮ್ಮ ಮತ್ತು ಗುತ್ಯಪ್ಪ ಮಾಧ್ಯಮಗಳೊಂದಿಗೆ ಮಾತನಾಡಿ, “ಸುಮಾರು 15 ದಿನಗಳ ಹಿಂದೆ ಸುಹೇಲ್ ನಮ್ಮ ಮನೆಗೆ ಬಾಡಿಗೆಗೆ ಬಂದಿದ್ದ. ಆತನೊಂದಿಗೆ ಸುಮಾರು ಹತ್ತು ಮಂದಿ ಯುವಕರು ಕೂಡ ಇದ್ದರು. ತಿಂಗಳಿಗೆ ₹6,000 ಬಾಡಿಗೆ ನೀಡುವುದಾಗಿ ಹೇಳಿದ್ದರು” ಎಂದು ತಿಳಿಸಿದ್ದಾರೆ.

ಅವರ ಪ್ರಕಾರ, ಸುಹೇಲ್ ಮತ್ತು ಆತನ ಜೊತೆಗಿದ್ದವರು ಹಿಂದಿಯಲ್ಲೇ ಮಾತನಾಡುತ್ತಿದ್ದು, ಹಾಲು ಹಾಗೂ ಮಜ್ಜಿಗೆಯನ್ನು ಖರೀದಿಸುತ್ತಿದ್ದರು. ಸ್ಥಳೀಯರೊಂದಿಗೆ ಹೆಚ್ಚು ಬೆರೆಯದೇ ತಮ್ಮಷ್ಟಕ್ಕೆ ತಾವು ಇರುತ್ತಿದ್ದ ಕಾರಣ ಯಾವುದೇ ಅನುಮಾನ ಮೂಡಿರಲಿಲ್ಲ ಎಂದು ಹೇಳಿದ್ದಾರೆ.

ಜೂನ್ 23ರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ 20ಕ್ಕೂ ಹೆಚ್ಚು ಪೊಲೀಸರು ಮನೆಗೆ ಆಗಮಿಸಿ ಬಾಗಿಲು ತೆರೆಯುವಂತೆ ಸೂಚಿಸಿದರು. ಬಾಗಿಲು ತೆರೆದ ತಕ್ಷಣ ಪೊಲೀಸರು ಒಳನುಗ್ಗಿ ಮನೆಯಲ್ಲಿದ್ದವರನ್ನು ವಶಕ್ಕೆ ಪಡೆದರು. ತನಿಖೆಗಾಗಿ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಮಾತ್ರ ತಿಳಿಸಿದ್ದು, ಬಳಿಕ ಟಿವಿ ಸುದ್ದಿಗಳ ಮೂಲಕವೇ ಸುಹೇಲ್ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತನಾಗಿರುವುದು ತಿಳಿಯಿತು ಎಂದು ಅವರು ವಿವರಿಸಿದ್ದಾರೆ.

ಸುಹೇಲ್ ಬಗ್ಗೆ ಮಾತನಾಡಿದ ಮನೆ ಮಾಲೀಕರು, “ಆತ ಆಗಾಗ ನಮ್ಮ ಬೈಕ್ ಕೇಳುತ್ತಿದ್ದ. ಪ್ರತಿ ಶುಕ್ರವಾರ ನಮಾಜ್‌ಗೆ ತೆರಳುತ್ತಿದ್ದ. ಉಳಿದವರಿಗಿಂತ ಹೆಚ್ಚು ಚುರುಕಾಗಿ ಕಾಣಿಸುತ್ತಿದ್ದ. ಆದರೆ ಆತ ಇಂತಹ ಗಂಭೀರ ಚಟುವಟಿಕೆಗಳಲ್ಲಿ ತೊಡಗಿರಬಹುದು ಎಂದು ಎಂದಿಗೂ ಊಹಿಸಿರಲಿಲ್ಲ” ಎಂದು ಹೇಳಿದ್ದಾರೆ.

“ಅವನ ಹಾಗೂ ಆತನ ಸಹಚರರ ನಿಜವಾದ ಹಿನ್ನೆಲೆ ಮೊದಲೇ ಗೊತ್ತಿದ್ದರೆ ಯಾವುದೇ ಕಾರಣಕ್ಕೂ ಮನೆ ಬಾಡಿಗೆಗೆ ನೀಡುತ್ತಿರಲಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೊಂದೆಡೆ, ಸುಹೇಲ್‌ನ ವಿಚಾರಣೆ ಮುಂದುವರಿದಿದ್ದು, ಆತನ ಸಂಪರ್ಕ ಜಾಲ, ಚಟುವಟಿಕೆಗಳು ಹಾಗೂ ಆರೋಪಿತ ಸಂಚುಗಳ ಕುರಿತು ತನಿಖಾ ಸಂಸ್ಥೆಗಳು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿವೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago