Categories: CrimeLatest

ಗಂಡ ರೇಪ್ ಮಾಡುತ್ತಿದ್ದರೆ ಪತ್ನಿಯೇ ಕಾವಲು: ಮಧ್ಯಪ್ರದೇಶದಲ್ಲಿ ಬೆಚ್ಚಿಬೀಳಿಸುವ ಪ್ರಕರಣ

ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಅತೀವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ಮೇಲೆ ಗಂಡ ದೌರ್ಜನ್ಯ ಎಸಗುತ್ತಿದ್ದಾಗ, ಪತ್ನಿಯೇ ಹೊರಗೆ ಕಾವಲು ಕಾಯುತ್ತಿದ್ದರೆಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಮಹಿಳೆ, ಆಕೆಯ ಪತಿ ಹಾಗೂ ಮೈದುನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ವರದಿ ಪ್ರಕಾರ, ಗುಲಾಬಗಂಜ್ ನಿವಾಸಿಯಾದ ಯಾಸ್ಮೀನ್ ಖಾನ್ ಬ್ಯೂಟಿ ಪಾರ್ಲರ್ ತರಬೇತಿ ನೀಡುತ್ತಿದ್ದಳು. ಈ ವೇಳೆ ಆಕೆಯ ಪತಿ ಶರೀಫ್ ಖಾನ್ ಕೂಡ ಅಲ್ಲೇ ಇರುತ್ತಿದ್ದನು. ಸುಮಾರು ನಾಲ್ಕು ತಿಂಗಳ ಹಿಂದೆ ಸಂತ್ರಸ್ತೆಯನ್ನು ತನ್ನ ಮನೆಗೆ ಬರಲು ಯಾಸ್ಮೀನ್ ಹೇಳಿದ್ದಳು. ಆದರೆ ಯುವತಿ ಮನೆಗೆ ಹೋದಾಗ ಯಾಸ್ಮೀನ್ ಬದಲಾಗಿ ಶರೀಫ್ ಇದ್ದನು.

ಯಾಸ್ಮೀನ್ ಬರುವುದಕ್ಕಾಗಿ ಕಾಯುತ್ತಿದ್ದ ವೇಳೆ, ಶರೀಫ್ ಯುವತಿಯ ಮೇಲೆ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ನಂತರ ಈ ವಿಷಯವನ್ನು ಹೊರಗೆ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ, ಸಂತ್ರಸ್ತೆ ಭಯದಿಂದ ಈ ವಿಚಾರವನ್ನು ಯಾರಿಗೂ ಹೇಳಿರಲಿಲ್ಲ.

ಆದರೆ ನಂತರ ಯಾಸ್ಮೀನ್ ಬಳಿ ಈ ವಿಚಾರ ತಿಳಿಸಿದರೂ, ಆಕೆ ಗಂಭೀರವಾಗಿ ಪರಿಗಣಿಸದೇ, ಬದಲಿಗೆ ಯುವತಿಯನ್ನು ಮತ್ತೆ ಮತ್ತೆ ಮನೆಗೆ ಕರೆಸಿ ಗಂಡನೊಂದಿಗೆ ಇರಲು ಒತ್ತಾಯಿಸುತ್ತಿದ್ದಳು ಎನ್ನಲಾಗಿದೆ. ಶರೀಫ್ ಒಳಗೆ ದೌರ್ಜನ್ಯ ನಡೆಸುತ್ತಿದ್ದಾಗ, ಯಾಸ್ಮೀನ್ ಹೊರಗೆ ಕಾವಲು ಕಾಯುತ್ತಿದ್ದಳು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇತ್ತೀಚೆಗೆ ಮತ್ತೆ ಮನೆಗೆ ಬರಲು ಒತ್ತಾಯಿಸಿ, ಬಾರದಿದ್ದರೆ ಘಟನೆ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ. ಯುವತಿ ಮನೆಗೆ ಹೋದಾಗ, ಯಾಸ್ಮೀನ್, ಶರೀಫ್ ಮತ್ತು ಆಕೆಯ ಮೈದುನ ಮುವೀನ್ ಖಾನ್ ಇದ್ದರು. ಈ ವೇಳೆ ಯುವತಿಯನ್ನು ಕೋಣೆಗೆ ಎಳೆದೊಯ್ದು ಮತ್ತೆ ದೌರ್ಜನ್ಯ ಮಾಡಲು ಯತ್ನಿಸಿದಾಗ, ಆಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಜಗಳ ಉಂಟಾಗಿ, ಶರೀಫ್ ಗಾಯಗೊಂಡಿದ್ದಾನೆ.

ಆತಂಕಗೊಂಡ ಯುವತಿ ತಕ್ಷಣ ಕುಟುಂಬಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಕುಟುಂಬಸ್ಥರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

5 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

20 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago