Latest

ಗೋ ಕಳ್ಳರನ್ನು ಕಂಡರೆ ನಡು ರಸ್ತೆಯಲ್ಲಿಯೇ ಅವರಿಗೆ ಗುಂಡು ಹೊಡೆಯಬೇಕು’ – ಸಚಿವ ಮಂಕಾಳು ವೈದ್ಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಗೋ ಕಳ್ಳತನ ನಡೆಯುತ್ತಿದ್ದು, ಇನ್ಮುಂದೆ ಗೋ ಕಳ್ಳರು ಕಂಡರೆ ನಡು ರಸ್ತೆಯಲ್ಲಿಯೇ ಅವರಿಗೆ ಗುಂಡು ಹೊಡೆಯಬೇಕು’ ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. `ಈ ಬಗ್ಗೆ ಪೊಲೀಸರಿಗೆ ಸಹ ಕಟ್ಟುನಿಟ್ಟಿನ ಸೂಚನೆ ಕೊಡುವೆ’ ಎಂದವರು ತಿಳಿಸಿದ್ದಾರೆ.

ಕಾರವಾರದಲ್ಲಿ ನಡೆದ ಕೆಡಿಪಿ ಸಭೆ ಮುಗಿಸಿ ಮಾಧ್ಯಮದವರ ಜೊತೆ ಮಾತನಾಡಿದ ಅವರು `ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಹ ಗೋ ಕಳ್ಳತನ ವ್ಯಾಪಕವಾಗಿತ್ತು. ಆದರೆ, ಅದರ ಯಾರೂ ಕ್ರಮ ಜರುಗಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗೋವು ಕಳ್ಳತನ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸಲಿದೆ’ ಎಂದು ಹೇಳಿದರು.

`ಗೋ ಕಳ್ಳತನ ವಿಷಯವಾಗಿ ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರನ್ನು ಟೀಕಿಸುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗಲೇ ಹೆಚ್ಚಿನ ಗೋ ಕಳ್ಳತನ ನಡೆದಿದೆ’ ಎಂದವರು ಹೇಳಿದರು.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago