ಬಾಗಲಕೋಟೆ ಜಿಲ್ಲೆ ಇಳಕಲ್ ಪಟ್ಟಣದ ಅಲಂಪೂರಪೇಟೆಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಅಮೀನಾ ಕೊಳೂರ ಅವರನ್ನು ಕರ್ತವ್ಯ ಲೋಪ ಮತ್ತು ಅನಾದೃತ ವರ್ತನೆಯ ಆರೋಪಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಜಿ. ಮಿರ್ಜಿ ಅವರು ಅಮಾನತು ಮಾಡಿದ್ದಾರೆ.
ಈಚೆಗೆ ಶಾಲೆಯ ಶಿಕ್ಷಕ ಅಂದಾನಯ್ಯ ವಸ್ತ್ರದ ಅವರಿಗೆ ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದರೆಂಬ ಆರೋಪವನ್ನು ಎದುರಿಸುತ್ತಿದ್ದ ಅಮೀನಾ ಕೊಳೂರ ವಿರುದ್ಧ, ಜಂಗಮ ಸಮಾಜದ ಮುಖಂಡರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಬಿಇಒ ಕಚೇರಿ ಮುಂದೆ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಅವರು ಶಿಕ್ಷಕಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದರು.
ಪ್ರತಿಭಟನೆಯ ನಂತರ ಶಿಕ್ಷಣ ಸಂಯೋಜಕರ ಮೂಲಕ ವರದಿ ಸಂಗ್ರಹಿಸಿದ ಬಿಇಒ ಜಾಸ್ಮೀನ್ ಕಿಲ್ಲೇದಾರ ಅವರು, ಅಮೀನಾ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಡಿಪಿಐಗೆ ಶಿಫಾರಸು ಸಲ್ಲಿಸಿದ್ದರು.
ಅದಕ್ಕೂ ಮುನ್ನದಿಂದಲೂ ಅಮೀನಾ ಕೊಳೂರ ವಿರುದ್ಧ ಹಲವಾರು ಗಂಭೀರ ಆರೋಪಗಳು ಕೇಳಿಬಂದಿದ್ದವು. ಅವರು ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದಾಗ ಅಕ್ಷರ ದಾಸೋಹ ಯೋಜನೆಯ ಅನುದಾನದ ವೆಚ್ಚಕ್ಕೆ ಸಂಬಂಧಿಸಿದ ರಸೀದಿಗಳನ್ನು ಸಂಗ್ರಹಿಸದೇ ಇರುವುದು, ಶಾಲೆಗೆ ಬಂದಿದ್ದ ಆಹಾರ ಧಾನ್ಯಗಳ ಮಾರಾಟ ಹಾಗೂ ದುರ್ಬಳಕೆ ಆರೋಪಗಳು, 8ನೇ ತರಗತಿಗೆ ದಾಖಲಾತಿ ತಡೆಯುವ ಮೂಲಕ ಶಾಲೆಯ ಅಭಿವೃದ್ಧಿಗೆ ಅಡ್ಡಿಯಾದ ಘಟನೆಗಳು, ಶಾಲಾ ದಾಖಲೆಗಳ ನಿರ್ವಹಣೆಯಲ್ಲಿ ಉಣಣಿ ಮತ್ತು ಇಲಾಖೆಯ ಅನುಮತಿ ಇಲ್ಲದೇ ಗಳಿಕೆ ರಜೆ ಬಳಸಿರುವ ಪ್ರಕರಣಗಳು ದಾಖಲಾಗಿವೆ.
ಇಲ್ಲದೆ, ಇತರ ಶಿಕ್ಷಕರ ಜೊತೆ ಪದೇಪದೆ ಜಗಳವಾಡುವ ಮೂಲಕ ಶಾಲೆಯ ಶೈಕ್ಷಣಿಕ ವಾತಾವರಣವನ್ನು ಹಾಳು ಮಾಡುವಂತ ಕಾರ್ಯಗಳಲ್ಲಿ ತೊಡಗಿದ್ದರೆಂಬ ಆರೋಪಗಳು ಕೂಡಾ ವರದಿಯಾಗಿವೆ. ಇವುಗಳನ್ನೆಲ್ಲಾ ಪರಿಗಣಿಸಿ ಅಮೀನಾ ಕೊಳೂರ ಅವರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಉಪನಿರ್ದೇಶಕರ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…