ಬಾಗಲಕೋಟೆ ಜಿಲ್ಲೆಯಲ್ಲಿ ಶಾಲಾ ಮಕ್ಕಳಿಗೆ ನೀಡಲಾಗುವ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಹಲವು ಅಧಿಕಾರಿಗಳು ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಬಾದಾಮಿ ತಾಲ್ಲೂಕಿನ ಸೂಳಿಕೇರಿ ಗ್ರಾಮದ ಗೋದಾಮಿನಲ್ಲಿ ಕಳೆದ ಅಕ್ಟೋಬರ್ ತಿಂಗಳಿನಲ್ಲಿ 44.7 ಕ್ವಿಂಟಲ್ ಹಾಲಿನ ಪುಡಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ರಚಿಸಲಾಗಿದ್ದು, ಹಾಲಿನ ಪುಡಿಯನ್ನು ಯಾವ ಶಾಲೆಗಳಿಂದ ಖರೀದಿಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ.
81 ಶಾಲೆಗಳಲ್ಲಿ ಹಾಲಿನ ನ್ಯೂನತೆ ಪತ್ತೆ
ಪ್ರಾಥಮಿಕ ತನಿಖೆಯಿಂದ 81 ಶಾಲೆಗಳಲ್ಲಿ ಮಕ್ಕಳಿಗೆ ಸರಿಯಾದ ಪ್ರಮಾಣದಲ್ಲಿ ಹಾಲು ನೀಡದೆ, ಅವು ಅಕ್ರಮ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಇದರಲ್ಲಿ 56 ಶಾಲೆಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, 15 ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಸಂಬಂಧಿತ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ.
ನೋಟಿಸ್, ಅಮಾನತು – ಅಧಿಕಾರಿಗಳ ವಿರುದ್ಧ ಕ್ರಮ
ಕ್ಷೀರಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸರಿಯಾದ ನಿರ್ವಹಣೆಗೆ ಜವಾಬ್ದಾರರಾಗಿರುವ ಶಾಲೆಗಳ ಪೈಕಿ 6 ಸರ್ಕಾರಿ ಹಾಗೂ 3 ಅನುದಾನಿತ ಶಾಲೆಗಳ ಮುಖ್ಯಸ್ಥರು ಈ ಕುರಿತು ಯಾವುದೇ ಉತ್ತರ ಅಥವಾ ದಾಖಲೆ ನೀಡದೆ ನಿರ್ಲಕ್ಷ್ಯ ತೋರಿರುವುದರಿಂದ, ಅವರಿಗೆ ಎರಡನೇ ನೋಟಿಸ್ ಜಾರಿಗೊಳಿಸಲಾಗಿದೆ.
ಘಟನೆ ನಡೆದ ಸಂದರ್ಭದಲ್ಲಿ ಪಿ.ಎಂ. ಪೋಷಣ್ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿಯಾಗಿದ್ದ ಕೇಶವ ಪೆಟ್ಲೂರ್ ಅವರ ಜವಾಬ್ದಾರಿಯ ಕುರಿತುವೂ ಪ್ರಶ್ನೆ ಎದುರಾಗಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾಗಿರುವ ಕಾರಣ ಅವರಿಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಲಾಗಿದೆ.
ಈ ಪ್ರಕರಣವು ಶಾಲಾ ಮಕ್ಕಳ ಪೋಷಕರಲ್ಲಿ ಆಕ್ರೋಶ ಉಂಟುಮಾಡಿದ್ದು, ಕ್ಷೀರಭಾಗ್ಯ ಯೋಜನೆಯ ಮಾದರಿಯಲ್ಲಿ ಯಾವುದೇ ಅಕ್ರಮ ನಡೆಯದಂತೆ ಹೆಚ್ಚಿನ ನಿಗಾ ವಹಿಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…