ಉಡುಪಿ: ಬ್ರಹ್ಮಾವರದ ಶಿರೂರು ಬಳಿದ ಮೂರುಕೈ-ನೀರ್ಜೆಡ್ಡು ಪ್ರದೇಶದಲ್ಲಿ ಮಾಂಸಕ್ಕಾಗಿ ದನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಬಂಧಿತರನ್ನು ಹೈಕಾಡಿಯ ಮುಜಾಫಿರ್ ಮತ್ತು ನೀರ್ಜೆಡ್ಡಿನ ಕೃಷ್ಣ ನಾಯ್ಕ ಎಂದು ಗುರುತಿಸಲಾಗಿದ್ದು, ಮಹಮ್ಮದ್ ಯಾಸಿನ್ ಎಂಬ ಆರೋಪಿ ಪರಾರಿಯಾಗಿದ್ದಾನೆ.
ಪ್ರಕರಣದ ವಿವರ ಈ ರೀತಿ: ಸಂಜೆಯ ವೇಳೆ ಮೂವರು ಆರೋಪಿಗಳು ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಬಂದು ರಸ್ತೆಯ ಬದಿಯಲ್ಲಿ ದನವೊಂದಕ್ಕೆ ಹಿಂಸೆ ನೀಡಿ ಹಗ್ಗದಿಂದ ಕಟ್ಟಿ ಕಾರಿಗೆ ತುರುವ ಕಾರ್ಯದಲ್ಲಿ ತೊಡಗಿದ್ದರು. ಆಗ ಅಚ್ಚಾನೈಕೆಗೂ ಬರುವಂತೆ ಬೈಕ್‌ನಲ್ಲಿ ಬಂದ ಸಾರ್ವಜನಿಕರೊಬ್ಬರು ಈ ದೃಶ್ಯವನ್ನು ನೋಡಿ ಆರೋಪಿಗಳನ್ನು ಪ್ರಶ್ನಿಸಲು ಮುಂದಾದಾಗ, ಮಹಮ್ಮದ್ ಯಾಸಿನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಮುಜಾಫಿರ್ ಕಾರನ್ನು ಚಾಲನೆ ಮಾಡಿ ಗೋಳಿಯಂಗಡಿ ಕಡೆಗೆ ವೇಗವಾಗಿ ಹೊರಟಿದ್ದಾನೆ.
ವಾಹನದ ನಂಬರ್ ನೋಂದಿಸಿಕೊಂಡ ಸಾರ್ವಜನಿಕರು ಕೂಡಲೇ ಬ್ರಹ್ಮಾವರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಾರು ಮತ್ತು ಕದ್ದ ದನದ ಸಹಿತ ಮುಜಾಫಿರ್ ಹಾಗೂ ಕೃಷ್ಣ ನಾಯ್ಕರನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯಿಂದ, ಈ ಆರೋಪಿಗಳು ದನಗಳನ್ನು ಕದಿದು ಮಾಂಸ ಮಾರಾಟಕ್ಕಾಗಿ ಸಾಗಿಸುತ್ತಿದ್ದರು ಎನ್ನುವುದು ಬಹಿರಂಗವಾಗಿದೆ. ಕೃಷ್ಣ ನಾಯ್ಕ ದನ ಖರೀದಿಗೆ ಮಧ್ಯವರ್ತಿ ಪಾತ್ರವಹಿಸಿದ್ದನೆಂದು ತಿಳಿದುಬಂದಿದೆ.
ಬಂಧಿತ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪರಾರಿಯಾಗಿರುವ ಮಹಮ್ಮದ್ ಯಾಸಿನ್ ಪತ್ತೆ ಹಚ್ಚಲು ಬ್ರಹ್ಮಾವರ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…