ಬೆಳಗಾವಿ, ಜುಲೈ 1: ಅಕ್ರಮ ಗೋ ಸಾಗಣೆ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಹುಕ್ಕೇರಿ ಪೊಲೀಸ್ ಠಾಣೆಯ ಉಪನಿರೀಕ್ಷಕ (ಪಿಎಸ್ಐ) ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಅಧೀಕ್ಷಕ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ.
ಜೂನ್ 26ರಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವೊಂದನ್ನು ತಡೆದು ಹುಕ್ಕೇರಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ, ಈ ಕುರಿತು ಪಿಎಸ್ಐ ನಿಖಿಲ್ ಕಾಂಬ್ಳೆ ಯಾವುದೇ ಎಫ್ಐಆರ್ ದಾಖಲಿಸದೇ, ಆರೋಪಿಗಳನ್ನು ಬಿಟ್ಟುಕೊಟ್ಟಿದ್ದರು. ಇದಲ್ಲದೆ, ಘಟನೆಯ ಕುರಿತು ತನ್ನ ಮೇಲಧಿಕಾರಿಗಳಿಗೆ ಮಾಹಿತಿಯನ್ನೂ ನೀಡಿದ್ದಿಲ್ಲ.
ಪೊಲೀಸ್ ಠಾಣೆಗೆ ಆಗಮಿಸಿದ್ದವರಲ್ಲಿ ಗಡಿಪಾರ ಆದೇಶ ಪಡೆದಿರುವ ರೌಡಿಶೀಟರ್ ಮಹಾವೀರ ಸೊಲ್ಲಾಪುರೆ ಕೂಡ ಇದ್ದಂತೆ ತಿಳಿದುಬಂದಿದೆ. ಈ ಎಲ್ಲ ಅಂಶಗಳನ್ನು ಆಧರಿಸಿ ಎಸ್ಪಿ ಗುಳೇದ್ ತೀವ್ರ ನಡವಳಿಕೆ ಕೈಗೊಂಡು ಪಿಎಸ್ಐ ನಿಖಿಲ್ ಕಾಂಬ್ಳೆ ಅಮಾನತು ಆದೇಶ ಹೊರಡಿಸಿದ್ದಾರೆ.
ಇದರೊಂದಿಗೆ ಪೊಲೀಸ್ ಇಲಾಖೆಯಲ್ಲಿ ಜವಾಬ್ದಾರಿ ನಿರ್ವಹಣೆಯ ಕುರಿತು ಮತ್ತೊಮ್ಮೆ ಚರ್ಚೆ ಹುಟ್ಟಿದ್ದು, ಉನ್ನತ ಅಧಿಕಾರಿಗಳ ಗಮನ ಸೆಳೆದಿದೆ.
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…