Latest

ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮ ಗಾಂಜಾ ವಶಕ್ಕೆ: ಅಬಕಾರಿ ಇಲಾಖೆಯ ದಾಳಿ

ಕೊಪ್ಪಳ: ಕುಷ್ಟಗಿ ತಾಲ್ಲೂಕಿನ ಚಿಕ್ಕವಂಕಲಕುಂಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಒಣ ಗಾಂಜಾ ಜಪ್ತಿ ಮಾಡಿರುವ ಅಬಕಾರಿ ಇಲಾಖೆಯ ಅಧಿಕಾರಿಗಳು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ಗುರುವಾರ ನಡೆದ ದಾಳಿಯಲ್ಲಿ, ಅಬಕಾರಿ ಇಲಾಖೆ ಒಟ್ಟು 188 ಗ್ರಾಂ ಒಣ ಗಾಂಜಾ ವಶಪಡಿಸಿಕೊಂಡಿದ್ದು, ಆರೋಪಿಯಾದ ಕುಂಟೆಪ್ಪ ಹಣಮಪ್ಪ ಪೂಜಾರಿ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆ, 1985ನ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

ಈ ದಾಳಿಯನ್ನು ಅಬಕಾರಿ ಅಪರ ಆಯುಕ್ತರು (ಜಾರಿ ಮತ್ತು ತನಿಖೆ), ಬೆಳಗಾವಿ ಕೇಂದ್ರ, ಹೊಸಪೇಟೆ ವಿಭಾಗದ ಅಬಕಾರಿ ಜಂಟಿ ಆಯುಕ್ತರು ಹಾಗೂ ಕೊಪ್ಪಳ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಅಬಕಾರಿ ಉಪ ಅಧೀಕ್ಷಕರಾದ ಭಾರತಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ದಾಳಿಯಲ್ಲಿ ಪಾಲ್ಗೊಂಡವರು:

ಅಬಕಾರಿ ಉಪ ಅಧೀಕ್ಷಕರಾದ ಭಾರತಿ

ಅಬಕಾರಿ ನಿರೀಕ್ಷಕ ಶಂಕರ ಗುಡದಾರ್

ಕೊಪ್ಪಳ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕ ತಿಮ್ಮಯ್ಯ

ಗ್ರಾಮ ಆಡಳಿತ ಅಧಿಕಾರಿ ಅಂಜು

ಅಬಕಾರಿ ಮುಖ್ಯ ಪೇದೆಗಳು: ಮೋಹನ್ ಕುಮಾರ್, ಹನಮಂತಪ್ಪ ಕುರಿ

ಗೃಹರಕ್ಷಕ ಶರಣಪ್ಪ ಹಾಗೂ ಇತರ ಸಿಬ್ಬಂದಿ

ಈ ದಾಳಿಯು ಗ್ರಾಮದಲ್ಲಿ ಅಕ್ರಮ ಮಾದಕವಸ್ತು ಮಾರಾಟವನ್ನು ತಡೆಗಟ್ಟಲು ಅಗತ್ಯ ಕ್ರಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

4 hours ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

9 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

9 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

10 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

10 hours ago