ಬಿಹಾರದ ಗೋಪಾಲ್‌ಗಂಜ್ ಜಿಲ್ಲಾ ಕಾರಾಗೃಹದಲ್ಲಿ ಖೈದಿಯೊಬ್ಬ ತಪಾಸಣೆ ವೇಳೆ ಮೊಬೈಲನ್ನು ಜೈಲು ಅಧಿಕಾರಿಗಳು ಪತ್ತೆ ಮಾಡಬಹುದು ಎಂದು ನುಂಗಿದ್ದಾನೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಶನಿವಾರ ಜೈಲು ತಪಾಸಣೆ ವೇಳೆ ಖೈಶರ್ ಅಲಿ ಎಂಬಾತ ಫೋನ್ ನುಂಗಿದ್ದ. ಆದರೆ, ಭಾನುವಾರ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಈ ವಿಷಯ ಬೆಳಕಿಗೆ ಬಂದಿದೆ.
‘ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕೈದಿ ಕಡೆಗೆ ವಿಧಿ ಇಲ್ಲದೇ ಜೈಲು ಅಧಿಕಾರಿಗಳಿಗೆ ಮಾಹಿತಿ ನೀಡಿ ನಡೆದ ಘಟನೆಗಳನ್ನು ವಿವರಿಸಿದ. ಇದಾದ ಮೇಲೆ ಆತನನ್ನು ತಕ್ಷಣವೇ ಗೋಪಾಲ್‌ಗಂಜ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು’ ಎಂದು ಗೋಪಾಲ್‌ಗಂಜ್ ಜೈಲು ಅಧೀಕ್ಷಕ ಮನೋಜ್ ಕುಮಾರ್ ಮಾಹಿತಿ ನೀಡಿದರು. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ವೈದ್ಯ ಸಲಾಮ್ ಸಿದ್ದಿಕಿ ಮಾತನಾಡಿ, ‘ಕೈದಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಹೊಟ್ಟೆಯ ಎಕ್ಸ್ ರೇ ತೆಗೆಯಲಾಗಿದೆ. ತಪಾಸಣೆ ವೇಳೆ ಮೊಬೈಲ್ ಇರುವುದು ಕಂಡುಬಂದಿದೆ’ ಎಂದರು. ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡವನ್ನು ರಚಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ವ್ಯಕ್ತಿಯನ್ನು ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರೆಫರ್ ಮಾಡಲಾಗಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…