ರಾಯಚೂರು, ಜುಲೈ 6: ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ನಡೆಸಿದ ಸುದೀರ್ಘ ಶೋಧಕಾರ್ಯ ಮತ್ತು ಖಚಿತ ಮಾಹಿತಿಯ ಆಧಾರಿತ ದಾಳಿಯಲ್ಲಿ, ನಗರ ಹೊರವಲಯದ ಲಾಡ್ಜ್ ಒಂದರಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ಜಾಲವನ್ನು ಭೇದಿಸಲು ಪೊಲೀಸರು ಯಶಸ್ವಿಯಾದರು.
ಕುಕನೂರ ಕ್ರಾಸ್ ಬಳಿ ಇರುವ “ಮೇಘಾ ರೆಸ್ಟೋರೆಂಟ್ ಹೊಟೇಲ್” ನಲ್ಲಿ ಮಹಿಳಾ ದೇಹ ವ್ಯಾಪಾರ ನಡೆಯುತ್ತಿರುವ ಮಾಹಿತಿ ಲಭಿಸಿದ ಹಿನ್ನೆಲೆ, ಗ್ರಾಮೀಣ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸಾಬಯ್ಯ ಹಾಗೂ ಪಿಎಸ್‌ಐ ಪ್ರಕಾಶ್ ಡಂಬಾಳ್ ನೇತೃತ್ವದ ತಂಡ ದಾಳಿಯನ್ನು ನಡೆಸಿತು. ದಾಳಿಯ ವೇಳೆ ಆರು ಮಹಿಳೆಯರನ್ನು ರಕ್ಷಿಸಲಾಗಿದೆ.
ಸ್ಥಳದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ದೇಹ ವ್ಯಾಪಾರದ ನಿರ್ವಹಣೆಗೆ ಬಳಸಲಾಗುತ್ತಿದ್ದ ಎರಡು ಕಾರುಗಳನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ. ಅಕ್ರಮ ವೇಶ್ಯಾವಾಟಿಕೆಯನ್ನು ಬೆಂಬಲಿಸಿದ್ದ ಲಾಡ್ಜ್ ಮಾಲೀಕರು ಹಾಗೂ ಆಪರೇಟರ್‌ಗಳ ವಿರುದ್ಧವೂ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಘಟನೆ ಮತ್ತೊಮ್ಮೆ ನಗರಾಭಿವೃದ್ದಿಯ ಹೆಸರಿನಲ್ಲಿ ನಡೆಯುತ್ತಿರುವ ಅಂತರ್ಮುಖಿ ಅಪರಾಧ ಚಟುವಟಿಕೆಗಳ ಕುರಿತ ಎಚ್ಚರಿಕೆಯನ್ನು ಪೊಲೀಸರಿಗೆ ನೀಡಿದ್ದು, ಶೀಘ್ರದಲ್ಲೇ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…