Latest

ರೊಸಾರಿಯೊ ಕಾಲೇಜು ಹಿಂಭಾಗದ ಗೋದಾಮಿನಲ್ಲಿ ಅಕ್ರಮ ಅಕ್ಕಿ ದಾಸ್ತಾನು ಬಯಲು: 500 ಕ್ವಿಂಟಲ್ ಅಕ್ಕಿ ವಶ

ಮಂಗಳೂರು ರೊಸಾರಿಯೊ ಕಾಲೇಜಿನ ಹಿಂಭಾಗದಲ್ಲಿರುವ ಖಾಸಗಿ ಗೋದಾಮೊಂದರಲ್ಲಿ ಸುಮಾರು 500 ಕ್ವಿಂಟಲ್ ಅಕ್ಕಿಯನ್ನು ಅನಧಿಕೃತವಾಗಿ ದಾಸ್ತಾನು ಮಾಡಲಾಗುತ್ತಿದ್ದ ಬೆಳಕಿಗೆ ಬಂದಿದೆ. ಸಾರ್ವಜನಿಕರಿಂದ ಬಂದ ದೂರು ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಈ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

ಸೋಮವಾರ ನಡೆಸಿದ ಈ ದಾಳಿಗೆ ಉಪನಿರ್ದೇಶಕಿ ಅನಿತಾ ವಿ. ಮಡ್ಲೂರು ನೇತೃತ್ವವಹಿಸಿದ್ದರು. ‘ಅನುಪಮಾ ಎಂಟರ್‌ಪ್ರೈಸಸ್‌’ ಸಂಸ್ಥೆಗೆ ಸೇರಿದ ಬಾಡಿಗೆ ಗೋದಾಮಿನಲ್ಲಿ ಬಾಸುಮತಿ, ಸೋನಾ ಮಸೂರಿ, ಜೀರಾ ಮತ್ತು ಕುಚ್ಚಲಕ್ಕಿ ಸೇರಿದಂತೆ ವಿವಿಧ ಬ್ರ್ಯಾಂಡ್‌ಗಳ ಅಕ್ಕಿ ಚೀಲಗಳು ಪತ್ತೆಯಾದವು. ಇವುಗಳ ಜೊತೆಗೆ ಯಾವುದೇ ಲೇಬಲ್ ಇಲ್ಲದ ಬಿಳಿ ಚೀಲಗಳಲ್ಲಿಯೂ ಅಕ್ಕಿ ಸೆರೆಯಾಗಿದೆ.

“ಈ ಅಕ್ಕಿಯ ನಡುವೆ ಪಡಿತರ ಅಕ್ಕಿಯೂ ಇರಬಹುದು ಎಂಬ ಶಂಕೆ ಇದ್ದು, ಎಲ್ಲಾ ಅಕ್ಕಿಯನ್ನು ವಶಕ್ಕೆ ಪಡೆದು ಅಗತ್ಯವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ,” ಎಂದು ಅನಿತಾ ಮಡ್ಲೂರು ತಿಳಿಸಿದರು.

ಉತ್ತರ ಕರ್ನಾಟಕದಿಂದ ಅಕ್ರಮವಾಗಿ ಪಡಿತರ ಅಕ್ಕಿಯನ್ನು ತರಿಸಿ ಪಾಲಿಶ್ ಮಾಡಿ, ಬೇರೆ ಬ್ರ್ಯಾಂಡ್ ಅಡಿಯಲ್ಲಿ ಮಾರುಕಟ್ಟೆಗೆ ಬಿಟ್ಟಿರುವ ಬಗ್ಗೆ ಇಲಾಖೆ ಕೆಲವೇ ದಿನಗಳ ಹಿಂದೆ ದೂರುಗಳನ್ನೂ ಪಡೆದಿತ್ತು. ಈ ಹಿನ್ನೆಲೆಯಲ್ಲಿ ವಶಪಡಿಸಿದ ಅಕ್ಕಿ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಫಲಿತಾಂಶದ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಇದೇ ವೇಳೆ, ಇಷ್ಟು ಹೆಚ್ಚಿನ ಪ್ರಮಾಣದ ಅಕ್ಕಿ ದಾಸ್ತಾನು ಮಾಡಲು ಗೋದಾಮಿನವರು ಅಗತ್ಯ ಅನುಮತಿ ಪಡೆದಿದ್ದಾರೇ ಎಂಬುದನ್ನೂ ತನಿಖೆ ಮಾಡಲಾಗುತ್ತಿದೆ.

ಈ ದಾಳಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿನ ಅಕ್ರಮ ಚಟುವಟಿಕೆಗಳನ್ನು ಬೆಳಕಿಗೆ ತಂದಿದ್ದು, ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago