ತುಂಗಭದ್ರಾ ನದಿ ದಡದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 340 ಮೆಟ್ರಿಕ್ ಟನ್ ಮರಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ನಂದಿಗುಡಿ ಮತ್ತು ಮಳಲಹಳ್ಳಿ ಗ್ರಾಮಗಳ ಸಮೀಪ ಈ ಕಾರ್ಯಾಚರಣೆ ನಡೆಸಲಾಗಿದ್ದು, ಉಪವಿಭಾಗಾಧಿಕಾರಿ ಸಂತೋಷಕುಮಾರ್ ಅವರ ನೇತೃತ್ವದಲ್ಲಿ ಸೋಮವಾರ ಈ ಪರಿಶೋಧನೆ ನಡೆಸಿ ಮರಳನ್ನು ವಶಪಡಿಸಿಕೊಳ್ಳಲಾಯಿತು.
ಅಕ್ರಮ ಗಣಿಗಾರಿಕೆಯನ್ನು ತಡೆಯಲು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಸಂತೋಷಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂಬಂಧ ವಿಶೇಷ ಪೊಲೀಸ್ ತಂಡ ರಚಿಸಿ ನಿಗಾ ವಹಿಸಲು ಆದೇಶಿಸಿದರು.
ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಗುರುಬಸವರಾಜ್, ಕಂದಾಯ ನಿರೀಕ್ಷಕ ಆನಂದ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕವಿತಾ ಹಾಗೂ ಪೊಲೀಸರು ಪಾಲ್ಗೊಂಡಿದ್ದರು. ಅಧಿಕಾರಿಗಳು ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಕಾನೂನುಬಾಹಿರ ಗಣಿಗಾರಿಕೆಯನ್ನು ತಡೆಯಲು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…