Categories: CorruptionLatest

ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಬಯಲು: ಡಿಸಿ ಸೇರಿ ಗಣಿ ಇಲಾಖೆ ಅಧಿಕಾರಿಗಳು, ಐವರು ತಹಶೀಲ್ದಾರ್‌ಗಳ ವಿರುದ್ಧ ಲೋಕಾಯುಕ್ತ ಪ್ರಕರಣ

ಬಾಗಲಕೋಟೆ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿ ಹಾಗೂ ಐದು ತಾಲ್ಲೂಕುಗಳ ತಹಶೀಲ್ದಾರ್‌ಗಳ ವಿರುದ್ಧ ಲೋಕಾಯುಕ್ತರು ಪ್ರಕರಣ ದಾಖಲಿಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಜಿಲ್ಲಾ ಉಪ ನಿರ್ದೇಶಕರು, ಜಿಲ್ಲಾಧಿಕಾರಿ ಹಾಗೂ ಬಾದಾಮಿ, ಮುಧೋಳ, ಜಮಖಂಡಿ, ಹುನಗುಂದ ಮತ್ತು ಇಲ್ಕಲ್ ತಾಲ್ಲೂಕುಗಳ ತಹಶೀಲ್ದಾರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಸ್ಥಳ ಪರಿಶೀಲನೆ ನಡೆಸುವಂತೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ.

ಲೋಕಾಯುಕ್ತ ತಂಡಗಳು ಹುನಗುಂದ, ಇಲ್ಕಲ್, ಬಾದಾಮಿ ಮತ್ತು ಮುಧೋಳ ತಾಲ್ಲೂಕುಗಳಲ್ಲಿ ಒಟ್ಟು 41 ಮರಳು ಗಣಿಗಾರಿಕೆ ಪ್ರದೇಶಗಳನ್ನು ಪರಿಶೀಲಿಸಿದಾಗ, ಕೇವಲ 9 ಸ್ಥಳಗಳಿಗೆ ಮಾತ್ರ ಕಾನೂನುಬದ್ಧ ಅನುಮತಿ ಇರುವುದಾಗಿ ಕಂಡುಬಂದಿದೆ. ಉಳಿದ ಎಲ್ಲಾ ಸ್ಥಳಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ದಾಳಿಯ ವೇಳೆ 62 ಟಿಪ್ಪರ್ ಲಾರಿಗಳು, ಎರಡು ಟ್ರ್ಯಾಕ್ಟರ್‌ಗಳು, 24 ಅಗೆಯುವ ಯಂತ್ರಗಳು, 15 ದೋಣಿಗಳು ಸೇರಿದಂತೆ ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಹಲವು ಯಂತ್ರೋಪಕರಣಗಳನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ 25 ಪ್ರಕರಣಗಳು ದಾಖಲಾಗಿವೆ.

ಲೋಕಾಯುಕ್ತ ವರದಿ ಪ್ರಕಾರ, ಕೃಷಿ ಭೂಮಿ, ನದಿ ದಂಡೆ ಹಾಗೂ ಹೊಳೆಗಳಲ್ಲಿ 15ರಿಂದ 20 ಅಡಿ ಆಳದವರೆಗೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಮರಳು ಅಗೆದು ಪರಿಸರಕ್ಕೆ ಭಾರೀ ಹಾನಿ ಉಂಟುಮಾಡಲಾಗಿದೆ. ಇದರಿಂದ ನದಿಪಾತ್ರ, ಕೃಷಿ ಭೂಮಿ ಹಾಗೂ ಸಾರ್ವಜನಿಕ ರಸ್ತೆಗಳಿಗೆ ಹಾನಿಯಾಗಿರುವುದು ಪರಿಶೀಲನೆಯಲ್ಲಿ ದೃಢಪಟ್ಟಿದೆ.

ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆಗಳು ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಲೋಕಾಯುಕ್ತರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ದಾಳಿಯ ವೇಳೆ ಸಂಗ್ರಹಿಸಿದ ವಿಡಿಯೊ, ಛಾಯಾಚಿತ್ರಗಳು ಹಾಗೂ ಡ್ರೋನ್ ದೃಶ್ಯಾವಳಿಗಳು ಅಕ್ರಮ ಗಣಿಗಾರಿಕೆಗೆ ಸ್ಪಷ್ಟ ಸಾಕ್ಷಿಯಾಗಿದ್ದು, ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಭಾರೀ ನಷ್ಟ ಉಂಟಾಗಿರುವ ಸಾಧ್ಯತೆ ಇದೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

21 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

21 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

21 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

2 days ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

2 days ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

2 days ago