ಭಟ್ಕಳ: ಭಟ್ಕಳ ಉಪವಿಭಾಗದ ನೂತನ ಎಎಸ್‌ಪಿ ರಾನು ಗುಪ್ತ, ಐಪಿಎಸ್ ಅವರು ಅಧಿಕಾರ ವಹಿಸಿಕೊಂಡ ಕೇವಲ 24 ಗಂಟೆಗಳಲ್ಲೇ ಅಕ್ರಮ ಮರಳು ಸಾಗಾಟದ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿ, ಆರು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 1ರ ರಾತ್ರಿ 11ರಿಂದ ಸೆಪ್ಟೆಂಬರ್ 2ರ ಬೆಳಗಿನ ಜಾವ 3ರವರೆಗೆ ನಡೆದ ಕಾರ್ಯಾಚರಣೆಯಲ್ಲಿ ಮಂಕಿ ಹಾಗೂ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್‌ಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಹಾಗೂ ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಸೇರಿದಂತೆ ಒಟ್ಟು ಆರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಗೆ ಭಟ್ಕಳ ಹಾಗೂ ಹೊನ್ನಾವರ ತಹಶೀಲ್ದಾರ್‌ಗಳ ಸಹಕಾರ ಪಡೆಯಲಾಗಿತ್ತು.
ವಶಪಡಿಸಿಕೊಂಡ ಪ್ರತಿಯೊಂದು ಟಿಪ್ಪರ್‌ಗೆ ₹24 ಸಾವಿರ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಮಂಕಿ ಹಾಗೂ ಮುರುಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಎಎಸ್‌ಪಿ ರಾನು ಗುಪ್ತ ಅವರ ನೇತೃತ್ವದಲ್ಲಿ ನಡೆದ ಮೊದಲ ಪ್ರಮುಖ ಕಾರ್ಯಾಚರಣೆಯಲ್ಲಿ ಆರು ಟಿಪ್ಪರ್‌ಗಳು ವಶವಾಗಿರುವುದು ಅಕ್ರಮ ಮರಳು ಸಾಗಾಟಗಾರರಿಗೆ ಎಚ್ಚರಿಕೆಯ ಸಂದೇಶ ನೀಡಿದೆ. ಮುಂದಿನ ದಿನಗಳಲ್ಲಿಯೂ ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಮುಂದುವರಿಯುವ ನಿರೀಕ್ಷೆಯಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…