ಪಡುಬಿದ್ರಿ: ಹೆಜಮಾಡಿ ಮಟ್ಟು ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು ಪಡುಬಿದ್ರಿ ಪೊಲೀಸರು ಎಪ್ರಿಲ್ 17ರ ಮಧ್ಯರಾತ್ರಿ ವಶಪಡಿಸಿಕೊಂಡಿದ್ದಾರೆ.
ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ (112)ಯ 6ನೇ ವಾಹನದಲ್ಲಿ ಗಸ್ತು ಹಾಕುತ್ತಿದ್ದ ಪೊಲೀಸರು ಮಡು ರಸ್ತೆಯಲ್ಲಿ ನಿಂತಿದ್ದ ಟಿಪ್ಪರ್ ಬಗ್ಗೆ ಅನುಮಾನ ವ್ಯಕ್ತಪಡಿಸಿ ಪರಿಶೀಲನೆ ನಡೆಸಿದಾಗ, ಪರವಾನಿಗೆ ಇಲ್ಲದೆ ಸುಮಾರು 2 ಯೂನಿಟ್ ಅಕ್ರಮ ಮರಳು ಸಾಗಿಸಲಾಗುತ್ತಿದ್ದು, ಅದರ ಮೌಲ್ಯವು ಅಂದಾಜು ರೂ. 7000 ಇರುವುದಾಗಿ ತಿಳಿದುಬಂದಿದೆ.
ಪೊಲೀಸರನ್ನು ಕಂಡ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮರಳು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಕಾನೂನುಬದ್ಧ ದಾಖಲೆಗಳು ಟಿಪ್ಪರ್‌ನಲ್ಲಿ ಲಭ್ಯವಿಲ್ಲದ ಕಾರಣ, ವಾಹನವನ್ನು ವಶಪಡಿಸಿಕೊಂಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…