Latest

ಅಂಗನವಾಡಿ ಪೌಷ್ಟಿಕ ಆಹಾರ ಅಕ್ರಮ ವಹಿವಾಟು – 26 ಮಂದಿ ಬಂಧನ

ಹುಬ್ಬಳ್ಳಿ-ಧಾರವಾಡದಲ್ಲಿ ಅಂಗನವಾಡಿ ಮಕ್ಕಳಿಗೆ ಸರಕಾರದಿಂದ ನೀಡುವ ಪೌಷ್ಟಿಕ ಆಹಾರವನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 18 ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 26 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದ್ರಲ್ಲಿಯೂ ಪ್ರಮುಖ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಆಹಾರ ವಶಪಡಿಕೆ:
ಧಾರವಾಡದ ನರೆಂದ್ರ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗುತ್ತಿದ್ದ ಸುಮಾರು 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ಪದಾರ್ಥಗಳು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ದಾಳಿ ನಡೆಸಿದಾಗ 329 ಚೀಲಗಳಲ್ಲಿ ಒಟ್ಟು 8 ಟನ್ ಆಹಾರ ಪದಾರ್ಥಗಳು ಪತ್ತೆಯಾಗಿದೆ. ವಶಪಡಿಸಿಕೊಂಡ ಆಹಾರದಲ್ಲಿ ಗೋಧಿ ರವಾ, ಮಿಲೇಟ್ ಲಡ್ಡು, ಅಕ್ಕಿ, ಹಾಲಿನ ಪುಡಿ, ಸಾಂಬಾರ್ ಮಸಾಲಾ ಪುಡಿ, ಬೆಲ್ಲ, ಉಪ್ಪಿಟ್ಟು ಮಸಾಲಾ, ಸಕ್ಕರೆ, ಕಡಲೆಕಾಳು ಸೇರಿದಂತೆ ಹಲವಾರು ಪದಾರ್ಥಗಳಿವೆ.

ಬಂಧಿತರು ಯಾರು?
ಈ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪಟ್ಟಿಯಲ್ಲಿ ನರೇಂದ್ರ ಗ್ರಾಮದ ಬೊಲೆರೋ ವಾಹನ ಮಾಲೀಕ ಮಂಜುನಾಥ ದೇಸಾಯಿ, ವಾಹನ ಚಾಲಕ ಬಸವರಾಜ ಭದ್ರಶೆಟ್ಟಿ, ಗೋದಾಮು ಮಾಲೀಕ ಮೊಹ್ಮದ್ ಗೌಸ್ ಖಲೀಪಾ, ಗೌತಮ್‌ಸಿಂಗ್ ಠಾಕೂರ್, ಮಂಜುನಾಥ ಮಾದರ, ಯರಗುಪ್ಪಿಯ ಫಕ್ಕಿರೇಶ ಹಲಗಿ, ಕೃಷ್ಣಾ ಮಾದರ, ರವಿ ಹರಿಜನ ಸೇರಿದ್ದಾರೆ. ಜೊತೆಗೆ 18 ಅಂಗನವಾಡಿ ಕಾರ್ಯಕರ್ತೆಯರು ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ದಾಳಿ ಹೇಗೆ ನಡೆಸಿದರು?
ಈ ಅಕ್ರಮ ಪೌಷ್ಟಿಕ ಆಹಾರ ವಹಿವಾಟಿನ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಕಸಬಾಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಆಹಾರವನ್ನು ಸಾಗಿಸುತ್ತಿದ್ದ ವಾಹನವನ್ನು ಹಿಡಿದು, ಬೃಹತ್ ಪ್ರಮಾಣದ ಪೌಷ್ಟಿಕ ಆಹಾರ ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದ ಮುಂದಿನ ತನಿಖೆ ತೀವ್ರಗೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ. ಅಂಗನವಾಡಿ ಮಕ್ಕಳ ಹಕ್ಕನ್ನು ಕಿತ್ತುಕೊಳ್ಳುವಂತಹ ಈ ರೀತಿಯ ಅಕ್ರಮಗಳಿಗೆ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago