ಲಿಂಗಸುಗೂರು: ಅರಣ್ಯ ಸಂಪತ್ತಾದ ಸಾಗುವಾನಿ ಮರವನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂರು ಬೊಲೆರೋ ಗೂಡ್ಸ್ ವಾಹನಗಳ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ ಮರದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ.
ತಾಲೂಕಿನ ಹಿರೇಉಪ್ಪೇರಿ ಗ್ರಾಮದಲ್ಲಿ ಸಾಗುವಾನಿ ಮರಗಳನ್ನು ಕಡಿದು, ದೇವದುರ್ಗ ತಾಲೂಕಿನ ಊಟಿ ಗ್ರಾಮಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣದ ಬಸವಸಾಗರ ವೃತ್ತದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹೊಸಕೇರಪ್ಪ ಅವರ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಈ ವೇಳೆ ಯಾವುದೇ ಅಧಿಕೃತ ದಾಖಲಾತಿಗಳಿಲ್ಲದೆ ಮೂರು ಬೊಲೆರೋ ಗೂಡ್ಸ್ ವಾಹನಗಳಲ್ಲಿ ಸಾಗಿಸುತ್ತಿದ್ದ 3.874 ಮೀಟರ್ ಅಳತೆಯ ಒಟ್ಟು 119 ಘನ ಸಾಗುವಾನಿ ಮರದ ತುಂಡುಗಳು ಪತ್ತೆಯಾಗಿವೆ. ಪೊಲೀಸರು ಸುಮಾರು ₹4,82,761 ಮೌಲ್ಯದ ಸಾಗುವಾನಿ ಮರದ ತುಂಡುಗಳು ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಮೂರು ಬೊಲೆರೋ ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕರಾದ ಮಲ್ಲೇಶ ಹುಣಸಿಗಿಡದ, ಅಭಿಜಿತ್, ಫಕ್ರುದ್ದೀನ್ ಮುಲ್ಲಾ, ಆಂಜನೇಯ ಮ್ಯಾಕಲರ್ ಹಾಗೂ ಜಮೀನಿನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುವವರ ವಿರುದ್ಧ ಪೊಲೀಸರು ಕೈಗೊಂಡಿರುವ ಈ ಕಾರ್ಯಾಚರಣೆ ಗಮನ ಸೆಳೆದಿದೆ.
ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನವೀಯ…
ರಾಜಸ್ಥಾನ: ಜಿಮ್ನಲ್ಲಿ ಕಟ್ಟುಮಸ್ತಾದ ದೇಹದಂಡನೆ ಪ್ರದರ್ಶಿಸುವ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿ 82 ವರ್ಷದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ…
ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಎಎಸ್ಐ ಅವರನ್ನು ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಹಿನ್ನೆಲೆಯಲ್ಲಿ…
ಯಲ್ಲಾಪುರ: ತಾಲೂಕಿನ ಹುಟ್ಕಮನ ಗ್ರಾಮದಲ್ಲಿ ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಒಂಟಿಮನೆ ದರೋಡೆ ನಡೆಸಿದ್ದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸುವಲ್ಲಿ…
ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…
ಮುಂಡಗೋಡ: ಪಟ್ಟಣದ ಬಸ್ ನಿಲ್ದಾಣದ ಎದುರಿನ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಮುಂಡಗೋಡ ಪೊಲೀಸರು…