Latest

ಅಕ್ರಮ ಸಂಬಂಧದ ಪ್ರಕರಣ: ಎಸ್‌ಐಗೆ ಪತ್ನಿ ಮತ್ತು ಮನೆಯವರಿಂದ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ!

ಭೋಪಾಲ್ (ಜುಲೈ 25): ಮಧ್ಯ ಪ್ರದೇಶದ ಇಂದೋರ್ ನಗರದ ಖಜ್ರಾನಾ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಅಭೂತಪೂರ್ವ ಘಟನೆ ನಡೆದಿದೆ. ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಎಸ್‌ಐ) ಒಬ್ಬರನ್ನು ಗುಂಪು ಮಹಿಳೆಯರು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಅಮಾನಷವಾಗಿ ಥಳಿಸಿರುವ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಮಹಿಳೆಯೊಬ್ಬರ ಮನೆಯಲ್ಲಿ ಎಸ್‌ಐ ಸುರೇಶ್ ಹೆಸರಿನ ಅಧಿಕಾರಿ ಮದ್ಯಪಾನ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಅಕ್ರಮ ಸಂಬಂಧದ ಬಗ್ಗೆ ಹಲವು ದಿನಗಳಿಂದ ಸಂಶಯದಲ್ಲಿದ್ದ ಪತ್ನಿ ಈ ದೃಶ್ಯವನ್ನು ನೋಡಿದ ನಂತರ ಸಿಡಿದು ಹೋಗಿದ್ದು, ಕುಟುಂಬಸ್ಥರ ಸಹಾಯದಿಂದ ಆತನನ್ನು ಹೊರಗೆ ಎಳೆದು ಬಂದು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ವೀಡಿಯೊ ಈಗ ಜೋರಾಗಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಗಿದೆ. ಸ್ಥಳೀಯರ ಪ್ರಕಾರ, ಸುರೇಶ್ ಕಳೆದ ಕೆಲ ತಿಂಗಳಿನಿಂದ ಖೇಡಿ ಪ್ರದೇಶದ ವಿವಾಹಿತ ಮಹಿಳೆಯೊಬ್ಬರ ಮನೆಗೆ ನಿಯಮಿತವಾಗಿ ಭೇಟಿ ನೀಡುತ್ತಿದ್ದರು. ಗುರುವಾರ ಬೆಳಿಗ್ಗೆ 6 ಗಂಟೆಯ ಸುಮಾರಿಗೆ, ಸ್ಥಳೀಯರು ಆತನನ್ನು ಅತ್ತ ಮಹಿಳೆಯ ಮನೆಯಲ್ಲಿ ಮದ್ಯಪಾನ ಮಾಡಿದ ಸ್ಥಿತಿಯಲ್ಲಿ ಪತ್ತೆಹಚ್ಚಿದರೆಂದೂ ಮಾಹಿತಿ ಲಭ್ಯವಾಗಿದೆ.

ಘಟನೆಯ ಬಳಿಕ ಪತ್ನಿ, ಆಕೆಯ ಬಂಧುಗಳು ಹಾಗೂ ಕೆಲ ನೆರೆಹೊರೆಯವರು ಸೇರಿ ಎಸ್‌ಐಯನ್ನು ಥಳಿಸಿದ್ದಾರೆ. ಪರಿಸ್ಥಿತಿ ತೀವ್ರಗೊಂಡ ಬಳಿಕ ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ಕರೆಸಿಕೊಳ್ಳಲಾಗಿದ್ದು, ಆರೋಪಿ ಮಹಿಳೆಯರ ಪೈಕಿ ಕೆಲವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
ಸುರೇಶ್ ಅವರ ವಿರುದ್ಧ ಕೂಡಾ ಇಲಾಖಾತ್ಮಕ ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇಂತಹ ವರ್ತನೆಯಿಂದ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಆಗುತ್ತಿದೆ ಎಂಬ ಆರೋಪಗಳು ಸಹ ಕೇಳಿ ಬರುತ್ತಿವೆ.

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

22 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago