ಗುಂಡ್ಲುಪೇಟೆ ಪಟ್ಟಣದ ಸಮೀಪದ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಮೂಖಹಳ್ಳಿ ಗ್ರಾಮದ ನಿವಾಸಿ ನಂಜುಂಡಸ್ವಾಮಿ (23) ಕೊಲೆಗೆ ಸ್ನೇಹಿತನ ಸಹೋದರಿಯೊಂದಿಗೆ ಇದ್ದ ಅಕ್ರಮ ಸಂಬಂಧವೇ ಕಾರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಕೆಲ ದಿನಗಳ ಹಿಂದೆ ನಂಜುಂಡಸ್ವಾಮಿ ಶವ ದೊಡ್ಡಕೆರೆ ಏರಿ ಬಳಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆತ ಸ್ನೇಹಿತ ಅಜಯ್ ಜೊತೆ ಬೈಕ್‌ನಲ್ಲಿ ಹೊರಟಿದ್ದಾನೆ ಎಂಬ ಮಾಹಿತಿ ದೊರೆತಿದ್ದು, ಈಗ ಅಜಯ್ ಅಲಿಯಾಸ್ ಪ್ರಮೋದ್ ಎಂಬಾತನೇ ಈ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖೆಯಲ್ಲಿ ತಿಳಿದುಬಂದಂತೆ, ಕೆಲಸ ಮುಗಿಸಿ ಮನೆಗೆ ಬಂದಿದ್ದ ನಂಜುಂಡಸ್ವಾಮಿಯನ್ನು ಪಾರ್ಟಿ ಮಾಡೋಣ ಎಂದು ಅಜಯ್ ಕರೆದುಕೊಂಡು ಹೋಗಿದ್ದಾನೆ. ಬಳಿಕ ಇಬ್ಬರೂ ಮದ್ಯಪಾನ ಮಾಡಿದ ಬಳಿಕ ಅಜಯ್ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.
ಬಾಲ್ಯದಿಂದಲೇ ನಂಜುಂಡಸ್ವಾಮಿ ಮತ್ತು ಅಜಯ್ ಆತ್ಮೀಯ ಸ್ನೇಹಿತರಾಗಿದ್ದರು. ಆದರೆ ಅಜಯ್‌ನ ಸಹೋದರಿಯೊಂದಿಗೆ ನಂಜುಂಡಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ವಿಷಯ ತಿಳಿದು ಅಜಯ್ ಕೋಪಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಇನ್ನೂ ಅಜಯ್ ಸಹೋದರಿ ಈಗಾಗಲೇ ಮದುವೆಯಾಗಿದ್ದರೂ ನಂಜುಂಡಸ್ವಾಮಿ ಜೊತೆ ಸಂಬಂಧ ಮುಂದುವರಿದಿತ್ತು ಎನ್ನಲಾಗಿದೆ. ಒಮ್ಮೆ ಆಕೆಯ ಪತಿ ಇಬ್ಬರನ್ನೂ ಖಾಸಗಿ ಸಂದರ್ಭದಲ್ಲೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ ಎಂಬ ಮಾಹಿತಿ ಕೂಡ ಹೊರಬಂದಿದೆ. ಈ ವಿಚಾರ ಅಜಯ್ ಕಿವಿಗೂ ಬಿದ್ದಿದ್ದರಿಂದ ಆತ ತೀವ್ರ ಕೋಪಗೊಂಡಿದ್ದಾನೆ.
ಮಾರ್ಚ್ 1ರಂದು ಮನೆಯಲ್ಲಿ ಮಲಗಿದ್ದ ನಂಜುಂಡಸ್ವಾಮಿಯನ್ನು ಹೊರಗೆ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿದ ಬಳಿಕ ಕೊಲೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ ಗುಂಡ್ಲುಪೇಟೆ ಪೊಲೀಸರು ಆರೋಪಿ ಅಜಯ್ ಅಲಿಯಾಸ್ ಪ್ರಮೋದ್ ಅನ್ನು ಬಂಧಿಸಿದ್ದು, ಕೊಲೆಗೆ ಬಳಸಿದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ ಸಂತಸದ ಸುದ್ದಿ ಬಂದಿದೆ. Railway Recruitment Board (ಆರ್‌ಆರ್‌ಬಿ) ದೇಶಾದ್ಯಂತ 11,127 ಅಸಿಸ್ಟಂಟ್…
ಪ್ರಿಯಕರನೊಂದಿಗೆ ಲಾಡ್ಜ್‌ನಲ್ಲಿ ಇದ್ದ ಪತ್ನಿಯನ್ನು ಪತಿಯೇ ರೆಡ್ ಹ್ಯಾಂಡ್ ಆಗಿ ಹಿಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಹಿಂದೆ…
ಪಟ್ಟಣದಲ್ಲಿ ಹುಚ್ಚುನಾಯಿ ಹಾವಳಿಯಿಂದಾಗಿ 13 ಜನಕ್ಕೆ ಕಚ್ಚಿ ಪಟ್ಟಣವನ್ನು ಬೆಚ್ಚಿ ಬೀಳಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಜಮ್ಮಾ ಮಸೀದಿ,…
ಸಾಮಾಜಿಕ ಮಾಧ್ಯಮಗಳಲ್ಲಿ ‘ವಡಾ ಪಾವ್ ಗರ್ಲ್’ ಎಂದು ಖ್ಯಾತಿ ಪಡೆದಿರುವ ಚಂದ್ರಿಕಾ ದೀಕ್ಷಿತ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಅವರು…
ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಉದ್ಯೋಗ ಪಡೆಯಲು ಪ್ರಯತ್ನಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ…
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಯನ್ನು ವೇಗಗೊಳಿಸಲು…