Categories: CrimeLatest

ಸ್ನೇಹಿತನ ಸಹೋದರಿ ಜೊತೆ ಆಕ್ರಮ ಸಂಬಂಧ; ಕೊಲೆಯಲ್ಲಿ ಅಂತ್ಯ

ಗುಂಡ್ಲುಪೇಟೆ ಪಟ್ಟಣದ ಸಮೀಪದ ದೊಡ್ಡಕೆರೆ ಏರಿ ಬಳಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಮೂಖಹಳ್ಳಿ ಗ್ರಾಮದ ನಿವಾಸಿ ನಂಜುಂಡಸ್ವಾಮಿ (23) ಕೊಲೆಗೆ ಸ್ನೇಹಿತನ ಸಹೋದರಿಯೊಂದಿಗೆ ಇದ್ದ ಅಕ್ರಮ ಸಂಬಂಧವೇ ಕಾರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಕೆಲ ದಿನಗಳ ಹಿಂದೆ ನಂಜುಂಡಸ್ವಾಮಿ ಶವ ದೊಡ್ಡಕೆರೆ ಏರಿ ಬಳಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆತ ಸ್ನೇಹಿತ ಅಜಯ್ ಜೊತೆ ಬೈಕ್‌ನಲ್ಲಿ ಹೊರಟಿದ್ದಾನೆ ಎಂಬ ಮಾಹಿತಿ ದೊರೆತಿದ್ದು, ಈಗ ಅಜಯ್ ಅಲಿಯಾಸ್ ಪ್ರಮೋದ್ ಎಂಬಾತನೇ ಈ ಕೊಲೆ ಪ್ರಕರಣದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯಲ್ಲಿ ತಿಳಿದುಬಂದಂತೆ, ಕೆಲಸ ಮುಗಿಸಿ ಮನೆಗೆ ಬಂದಿದ್ದ ನಂಜುಂಡಸ್ವಾಮಿಯನ್ನು ಪಾರ್ಟಿ ಮಾಡೋಣ ಎಂದು ಅಜಯ್ ಕರೆದುಕೊಂಡು ಹೋಗಿದ್ದಾನೆ. ಬಳಿಕ ಇಬ್ಬರೂ ಮದ್ಯಪಾನ ಮಾಡಿದ ಬಳಿಕ ಅಜಯ್ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂಬುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಬಾಲ್ಯದಿಂದಲೇ ನಂಜುಂಡಸ್ವಾಮಿ ಮತ್ತು ಅಜಯ್ ಆತ್ಮೀಯ ಸ್ನೇಹಿತರಾಗಿದ್ದರು. ಆದರೆ ಅಜಯ್‌ನ ಸಹೋದರಿಯೊಂದಿಗೆ ನಂಜುಂಡಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ವಿಷಯ ತಿಳಿದು ಅಜಯ್ ಕೋಪಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನೂ ಅಜಯ್ ಸಹೋದರಿ ಈಗಾಗಲೇ ಮದುವೆಯಾಗಿದ್ದರೂ ನಂಜುಂಡಸ್ವಾಮಿ ಜೊತೆ ಸಂಬಂಧ ಮುಂದುವರಿದಿತ್ತು ಎನ್ನಲಾಗಿದೆ. ಒಮ್ಮೆ ಆಕೆಯ ಪತಿ ಇಬ್ಬರನ್ನೂ ಖಾಸಗಿ ಸಂದರ್ಭದಲ್ಲೇ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ ಎಂಬ ಮಾಹಿತಿ ಕೂಡ ಹೊರಬಂದಿದೆ. ಈ ವಿಚಾರ ಅಜಯ್ ಕಿವಿಗೂ ಬಿದ್ದಿದ್ದರಿಂದ ಆತ ತೀವ್ರ ಕೋಪಗೊಂಡಿದ್ದಾನೆ.

ಮಾರ್ಚ್ 1ರಂದು ಮನೆಯಲ್ಲಿ ಮಲಗಿದ್ದ ನಂಜುಂಡಸ್ವಾಮಿಯನ್ನು ಹೊರಗೆ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿದ ಬಳಿಕ ಕೊಲೆ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಿದ ಗುಂಡ್ಲುಪೇಟೆ ಪೊಲೀಸರು ಆರೋಪಿ ಅಜಯ್ ಅಲಿಯಾಸ್ ಪ್ರಮೋದ್ ಅನ್ನು ಬಂಧಿಸಿದ್ದು, ಕೊಲೆಗೆ ಬಳಸಿದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

12 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

16 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago