Categories: CrimeLatest

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ.

ಬಂಧಿತ ಶಿಕ್ಷಕಿಯನ್ನು 25 ವರ್ಷದ ಮಾರಿಸ್ ನಿಕೋಲ್ಸ್ ಎಂದು ಗುರುತಿಸಲಾಗಿದೆ. ಈಕೆ ಅಲೆಕ್ಸಾಂಡರ್ ಹೈಸ್ಕೂಲ್‌ನಲ್ಲಿ ಜೀವಶಾಸ್ತ್ರ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪೊಲೀಸರ ಮಾಹಿತಿ ಪ್ರಕಾರ, ನಿಕೋಲ್ಸ್ ಮೇ 3ರಂದು ವಿದ್ಯಾರ್ಥಿಯೊಬ್ಬನೊಂದಿಗೆ ಶಾಲೆಯ ಕೋಣೆಯಲ್ಲಿಯೂ ಹಾಗೂ ವಾಹನದಲ್ಲಿಯೂ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ಇತರ ಕೆಲ ವಿದ್ಯಾರ್ಥಿಗಳಿಗೆ ಅನುಚಿತ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾಳೆ ಎನ್ನಲಾಗಿದೆ.

ಪ್ರಕರಣದಲ್ಲಿ ಮತ್ತೊಂದು ಅಚ್ಚರಿಯ ಸಂಗತಿಯೂ ಬೆಳಕಿಗೆ ಬಂದಿದೆ. ಶಿಕ್ಷಕಿ ಕಳುಹಿಸಿದ್ದ ವಿಡಿಯೋಗಳನ್ನು ಆಧಾರವನ್ನಾಗಿ ಮಾಡಿಕೊಂಡು ಕೆಲ ವಿದ್ಯಾರ್ಥಿಗಳು, “ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ನೀಡಬೇಕು” ಎಂದು ಶಿಕ್ಷಕಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಮಾತು ಕೇಳದಿದ್ದರೆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

ಪ್ರಸ್ತುತ ಮಾರಿಸ್ ನಿಕೋಲ್ಸ್ ವಿರುದ್ಧ ಮಕ್ಕಳ ಮೇಲಿನ ದೌರ್ಜನ್ಯ, ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಸಾಕ್ಷ್ಯ ನಾಶಪಡಿಸಿದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

11 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago