ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿವಾದಾತ್ಮಕ ಘಟನೆ ಹಿನ್ನಲೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಅವರು ವಿದ್ಯಾರ್ಥಿಗಳನ್ನೇ ಬಳಸಿಕೊಂಡು ಶಾಲಾ ಆವರಣದ ಬಳಿ ಪಾಚಿ ತುಂಬಿದ್ದ ಚರಂಡಿಯನ್ನು ಸ್ವಚ್ಛಗೊಳಿಸಿದ ಘಟನೆ ನಡೆದಿದ್ದು, ಇದಕ್ಕೆ ಪೋಷಕರು ಹಾಗೂ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮಕ್ಕಳ ಕೈಯಲ್ಲಿ ಗದ್ದಲಿ, ಚರಂಡಿ ಸ್ವಚ್ಛಗೊಳನೆ
ಪೆನ್ ಹಿಡಿದು ಓದಲು ಬರೆಯಬೇಕಾದ ಮಕ್ಕಳ ಕೈಯಲ್ಲಿ ಗದ್ದಲಿ, ತೊಟ್ಟಿ ನೀಡಿ, ಪಾಚಿ ತುಂಬಿದ ಚರಂಡಿ ಸ್ವಚ್ಛಗೊಳಿಸುವಂತೆ ಮುಖ್ಯೋಪಾಧ್ಯಾಯರು ನಿರ್ದೇಶಿಸಿದರೆಂದು ಪೋಷಕರು ಆಕ್ಷೇಪಿಸಿದ್ದಾರೆ. ಗಬ್ಬು ನಾರುತ್ತಿದ್ದ ಚರಂಡಿಯನ್ನು ಶಾಲಾ ಮಕ್ಕಳ ಮೂಲಕ ಒರೆಸಿಸಿದ ದೃಶ್ಯಗಳು ಸಾರ್ವಜನಿಕರು ಕಂಡಿದ್ದು, ಈ ಸಂಬಂಧ ಸ್ಥಳೀಯರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
ಪೋಷಕರ ಆಕ್ರೋಶ, ಗ್ರಾಮಸ್ಥರ ಪ್ರತಿಭಟನೆ
ಮಕ್ಕಳು ಶಾಲೆಗೆ ಓದಲು ಹೋಗುವ ಬದಲು ಬಯಲಲ್ಲಿ ಹೊಟ್ಟೆತುಂಬಿಸಲು ಹೋಗುವವರಂತೆ ಶ್ರಮ ತೆಗೆದುಕೊಳ್ಳುತ್ತಿರುವ ದೃಶ್ಯ ಪೋಷಕರನ್ನು ಕಳವಳಗೊಳಿಸಿದೆ. ಈ ಬಗ್ಗೆ ಗ್ರಾಮಸ್ಥರು ಮತ್ತು ಪೋಷಕರು ಶಾಲೆಗೆ ಬಂದು ಮುಖ್ಯೋಪಾಧ್ಯಾಯರನ್ನು ತರಾಟೆಗೆ ತೆಗೆದುಕೊಂಡು, ಇದನ್ನು ಖಂಡಿಸಿದ್ದಾರೆ. ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಜವಾಬ್ದಾರಿ ಆಡಳಿತಕ್ಕೆ ಸೇರಿದ್ದು, ಮಕ್ಕಳಿಗೆ ಈ ರೀತಿಯ ಕೆಲಸ ಕೊಡಿಸುವುದು ತೀರ್ವ ಖಂಡನೀಯ ಎಂದು ಅವರು ಹೇಳಿದ್ದಾರೆ.
ಪ್ರಶಾಸನದ ಪ್ರತಿಕ್ರಿಯೆ ನಿರೀಕ್ಷೆ
ಈ ವಿಷಯ ಈಗ ಶಿಕ್ಷಣ ಇಲಾಖೆಯ ಗಮನಕ್ಕೂ ತಲುಪಿದ್ದು, ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆಯೇ ಎಂಬುದರ ಬಗ್ಗೆ ಎಲ್ಲರೂ ಕಾದು ನೋಡುತ್ತಿದ್ದಾರೆ. ಮಕ್ಕಳ ಸುರಕ್ಷತೆ ಮತ್ತು ಅವರ ಶಿಕ್ಷಣದ ಹಿತವನ್ನು ಮೊದಲ ಆದ್ಯತೆಯಾಗಿ ಪರಿಗಣಿಸುವಂತೆ ಪೋಷಕರು ಆಗ್ರಹಿಸಿದ್ದಾರೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…