Latest

ರಸ್ತೆಯಲ್ಲಿ ಕಸ ಎಸೆದವರು ಹಲ್ಲೆಗೆ ಮುಂದಾದ ಘಟನೆ: ಪ್ರಾಧ್ಯಾಪಕರಿಗೆ ಗಾಯ, ಮೂವರು ವಶಕ್ಕೆ

ಬೆಂಗಳೂರು: ಆಟೊ ರಿಕ್ಷಾದಿಂದ ರಸ್ತೆಗೆ ಕಸ ಎಸೆದು ಹೋಗುತ್ತಿದ್ದವರನ್ನು ತಡೆಯುತ್ತಿದ್ದ ಪ್ರಾಧ್ಯಾಪಕರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಜೆಎಚ್‌ಬಿಸಿಎಸ್ ಲೇಔಟ್‌ನಲ್ಲಿ ಏಪ್ರಿಲ್ 21ರಂದು ನಡೆದಿದೆ.

ದಯಾನಂದ ಸಾಗರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರಬಿಂದೊ ಗುಪ್ತಾ ಎಂಬವರು ಹಲ್ಲೆಗೆ ಒಳಗಾದವರು. ಅವರ ಹೇಳಿಕೆಯಂತೆ, “ಚಲಿಸುತ್ತಿದ್ದ ಆಟೊದಿಂದ ಮೂವರು ಯುವಕರು ರಸ್ತೆಮಧ್ಯೆ ಕಸದೊಂದಿಗೆ ಗ್ಲಾಸ್ ಬಾಟಲ್ಗಳನ್ನು ಎಸೆದು ಹೋಗುತ್ತಿದ್ದರು. ಇದನ್ನು ನೋಡಿ ನಾನವರು ಮಾಡಿದ ತಪ್ಪನ್ನು ತಿದ್ದಿ, ಸಾರ್ವಜನಿಕ ಸ್ಥಳವನ್ನು ಕಸದಿಂದ ಕಳೆಗುಂದಿಸಬಾರದು ಎಂದು ಹೇಳಿದ್ದಾರೆ.”

ಆದರೆ ಈ ಮಾತಿಗೆ ಕೋಪಗೊಂಡ ಆತನೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಆಟೊ ನಿಲ್ಲಿಸಿ ಕೆಳಗಿಳಿದು, ಅರಬಿಂದೊ ಗುಪ್ತಾ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಎನ್‌ಸಿಆರ್ ದಾಖಲೆಯಾಗಿದ್ದು, ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಸಾರ್ವಜನಿಕ ಸ್ಥಳದ ಸ್ವಚ್ಛತೆಗೆ ಹಿತವಚನ ನೀಡಿದ ವ್ಯಕ್ತಿಗೆ ಹಿಂಸೆ ತರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

3 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago