ಬೆಂಗಳೂರು: ಆಟೊ ರಿಕ್ಷಾದಿಂದ ರಸ್ತೆಗೆ ಕಸ ಎಸೆದು ಹೋಗುತ್ತಿದ್ದವರನ್ನು ತಡೆಯುತ್ತಿದ್ದ ಪ್ರಾಧ್ಯಾಪಕರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಜೆಎಚ್‌ಬಿಸಿಎಸ್ ಲೇಔಟ್‌ನಲ್ಲಿ ಏಪ್ರಿಲ್ 21ರಂದು ನಡೆದಿದೆ.
ದಯಾನಂದ ಸಾಗರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಅರಬಿಂದೊ ಗುಪ್ತಾ ಎಂಬವರು ಹಲ್ಲೆಗೆ ಒಳಗಾದವರು. ಅವರ ಹೇಳಿಕೆಯಂತೆ, “ಚಲಿಸುತ್ತಿದ್ದ ಆಟೊದಿಂದ ಮೂವರು ಯುವಕರು ರಸ್ತೆಮಧ್ಯೆ ಕಸದೊಂದಿಗೆ ಗ್ಲಾಸ್ ಬಾಟಲ್ಗಳನ್ನು ಎಸೆದು ಹೋಗುತ್ತಿದ್ದರು. ಇದನ್ನು ನೋಡಿ ನಾನವರು ಮಾಡಿದ ತಪ್ಪನ್ನು ತಿದ್ದಿ, ಸಾರ್ವಜನಿಕ ಸ್ಥಳವನ್ನು ಕಸದಿಂದ ಕಳೆಗುಂದಿಸಬಾರದು ಎಂದು ಹೇಳಿದ್ದಾರೆ.”
ಆದರೆ ಈ ಮಾತಿಗೆ ಕೋಪಗೊಂಡ ಆತನೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಆಟೊ ನಿಲ್ಲಿಸಿ ಕೆಳಗಿಳಿದು, ಅರಬಿಂದೊ ಗುಪ್ತಾ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಎನ್‌ಸಿಆರ್ ದಾಖಲೆಯಾಗಿದ್ದು, ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಸಾರ್ವಜನಿಕ ಸ್ಥಳದ ಸ್ವಚ್ಛತೆಗೆ ಹಿತವಚನ ನೀಡಿದ ವ್ಯಕ್ತಿಗೆ ಹಿಂಸೆ ತರುವ ಘಟನೆ ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…