Latest

ಟೆರೆಸ್‌ನಲ್ಲಿ ಅಸಭ್ಯ ಕೃತ್ಯ: ಯುವತಿಯ ಎದುರು ಹಸ್ತಮೈಥುನ ಮಾಡಿ ಕಿರುಕುಳ ನೀಡಿದ ವ್ಯಕ್ತಿ”

ಬೆಂಗಳೂರು: ಯುವತಿಯೊಬ್ಬಳಿಗೆ ಬೇರೊಬ್ಬ ವ್ಯಕ್ತಿಯ ಅಸಭ್ಯ ವರ್ತನೆಯಿಂದ ತೀವ್ರ ಆಘಾತವಾಗಿದೆ. ತನ್ನ ಮನೆಯಿಂದ ಪಕ್ಕದ ಕಟ್ಟಡದ ಟೆರೆಸ್ ಕಡೆ ನೋಡುವಾಗ, ಅಲ್ಲಿ ನಿಂತು ಆ ವ್ಯಕ್ತಿ ಜಿಪ್‌ ತೆರೆದು ಹಸ್ತಮೈಥುನ ಮಾಡುತ್ತಿದ್ದಾನೆ ಎಂಬ ಭೀಕರ ಅನುಭವವನ್ನು ಯುವತಿ ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾಳೆ.

‘NSFW’ ಎಂಬ ಬಳಕೆದಾರ ಹೆಸರಿನಿಂದ ಯುವತಿ ಈ ಕುರಿತು ವಿಡಿಯೋ ಸಹಿತ ಒಂದು ಪೋಸ್ಟ್ ಹಾಕಿದ್ದು, “ಈ ವ್ಯಕ್ತಿ ನನ್ನ ಮುಂದೆಯೇ ಇಂತಹ ಅಸಭ್ಯ ವರ್ತನೆ ನಡೆಸಿದ. ನಾನು ಶಾಕ್‌ಗೆ ಒಳಗಾದೆ. ಅಸಹ್ಯವಾಯಿತು, ಹೆದರಿದೆ, ಏನು ಮಾಡಬೇಕೆಂದು ತಿಳಿಯದಂತಾಯಿತು. ಇಂತಹ ಸಂದರ್ಭದಲ್ಲೇನಾದರೂ ಸರಿಯಾದ, ಸುರಕ್ಷಿತ ಮಾರ್ಗವಿದ್ದರೆ ದಯವಿಟ್ಟು ತಿಳಿಸಿ” ಎಂದು ಬೇಸರ ವ್ಯಕ್ತಪಡಿಸಿದ್ದಾಳೆ.

ಆದರೆ, ಈ ವಿಡಿಯೋ ಹಂಚಿಕೊಂಡಿದ್ದಕ್ಕಾಗಿ ಯುವತಿಯ ರೆಡ್ಡಿಟ್ ಖಾತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಕುರಿತು ಆತಂಕ ವ್ಯಕ್ತಪಡಿಸಿದ ಅವರು, “ನನಗೆ ಈಗಾಗಿ ಇನ್ನಷ್ಟು ಭಯವಾಗಿದೆ. ನನ್ನ ಸುರಕ್ಷತೆಯ ಬಗ್ಗೆ ಆತಂಕವಿದೆ” ಎಂದು ಮತ್ತೊಮ್ಮೆ ಹೇಳಿದ್ದಾರೆ.

ಈ ಪೋಸ್ಟ್‌ ವೈರಲ್ ಆದ ನಂತರ ಹಲವರು ಯುವತಿಗೆ ಧೈರ್ಯ ತುಂಬಿದ್ದಾರೆ. ಕೆಲವರು, “ಈತನ ಫೋಟೋಗಳನ್ನು ಕುಟುಂಬ ಸದಸ್ಯರು ಹಾಗೂ ಮಾಧ್ಯಮಗಳಿಗೆ ಕಳುಹಿಸಿ, ಪೊಲೀಸರಿಗೆ ದೂರು ನೀಡಿ, ಕಾನೂನು ಕ್ರಮಕ್ಕೆ ಮುಂದಾಗು” ಎಂದು ಸಲಹೆ ನೀಡಿದ್ದಾರೆ. ಇನ್ನು ಕೆಲವರು ನೇರವಾಗಿ ಎಫ್‌ಐಆರ್ ದಾಖಲಿಸಲು ಪ್ರೋತ್ಸಾಹಿಸಿದ್ದಾರೆ.

ಈ ಘಟನೆಯು ಎಲ್ಲಿ ನಡೆದಿದೆ, ಯುವತಿ ಯಾರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಆದರೆ ಈ ಘಟನೆ ಮಹಿಳೆಯರ ವಿರುದ್ಧ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬೆನ್ನಟ್ಟಿದ ಮತ್ತೊಂದು ಉದಾಹರಣೆಯಾಗಿ ನೆಟ್ಟಿಗರಲ್ಲಿ ಚರ್ಚೆಗೆ ಗ್ರಾಸವಾಗಿದೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

19 minutes ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

21 minutes ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

23 minutes ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

53 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

1 hour ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

2 hours ago