ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ಸವಾಲೊಡ್ಡುವ ಮತ್ತೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೆಬ್ಬಾಳದಿಂದ ಮಾನ್ಯತಾ ಟೆಕ್ ಪಾರ್ಕ್ ಕಡೆಗೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಯುವತಿಯೊಬ್ಬಳಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ನಡೆದಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಹಾಗೂ ಚಾಲಕರ ಸಮಯೋಚಿತ ಕ್ರಮದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.
ಮಾಹಿತಿಯ ಪ್ರಕಾರ, ಬಸ್‌ನಲ್ಲಿ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವ್ಯಕ್ತಿ ಯುವತಿಗೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇದರಿಂದ ಆತಂಕಗೊಂಡ ಯುವತಿ ಕೂಡಲೇ ಆಕ್ಷೇಪ ವ್ಯಕ್ತಪಡಿಸಿದ್ದು, ಆಕೆಯ ಕೂಗನ್ನು ಕೇಳಿ ಎಚ್ಚೆತ್ತ ಇತರ ಪ್ರಯಾಣಿಕರು ಆರೋಪಿಯನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕೆಲವರು ಆತನಿಗೆ ಧರ್ಮದೇಟು ನೀಡಿ ಬಸ್‌ನ್ನು ನಿಲ್ಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಯುವತಿಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ಉಂಟುಮಾಡುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…