Categories: CrimeLatest

ದೇವಾಲಯದಲ್ಲಿ ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಪೂಜಾರಿ ವಿರುದ್ಧ ಪೋಕ್ಸೋ ಪ್ರಕರಣ

ಹೈದರಾಬಾದ್: ದೇವಾಲಯಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕೃತ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಪೂಜಾರಿಯೊಬ್ಬನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಘಟನೆ ಹೈದರಾಬಾದ್‌ನ ರಾಮಚಂದ್ರಪುರಂ ಮಾರುಕಟ್ಟೆ ಸಮೀಪ ನಡೆದಿದೆ.

ಆರೋಪಿಯಾಗಿರುವ ಪೂಜಾರಿ ಸಾಯಿಲು ಹಲವು ದಿನಗಳಿಂದ ದೇವಾಲಯಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಯರ ಮೇಲೆ ಅನುಮಾನಾಸ್ಪದವಾಗಿ ಗಮನಹರಿಸುತ್ತಿದ್ದ ಎನ್ನಲಾಗಿದೆ. ಆತನ ವರ್ತನೆಯ ಬಗ್ಗೆ ಅನುಮಾನಗೊಂಡ ಸ್ಥಳೀಯ ಯುವಕರು ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದರು.

ಈ ನಡುವೆ, ಸಾಯಿಲು ಅಪ್ರಾಪ್ತ ಬಾಲಕಿಯೊಬ್ಬಳನ್ನು ದೇವಸ್ಥಾನದ ಒಳಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ಯುವಕರು ಕೂಡಲೇ ಸ್ಥಳಕ್ಕೆ ತೆರಳಿ ಬಾಗಿಲು ತೆರೆದು ಒಳಗೆ ಪ್ರವೇಶಿಸಿದ್ದಾರೆ. ಈ ವೇಳೆ ಪೂಜಾರಿಯ ವರ್ತನೆ ಕಂಡು ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಘಟನೆಯನ್ನು ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಘಟನೆ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿದ್ದಾರೆ.

ಅಪ್ರಾಪ್ತ ಬಾಲಕಿಯ ಹೇಳಿಕೆ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಇಂತಹ ಆರೋಪ ಕೇಳಿಬಂದಿರುವುದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ಗರ್ಭಪಾತ ಮಾಡಿಸಿದ ಆರೋಪ; ವೈದ್ಯ, ನರ್ಸ್ ಸೇರಿ 7 ಮಂದಿ ಬಂಧನ

ಗದಗ: ಎಸ್.ಎಂ. ಕೃಷ್ಣಾ ನಗರದ 26 ವರ್ಷದ ಯುವತಿ ಮೇಲೆ ಪ್ರತ್ಯೇಕವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಆಕೆ ಗರ್ಭಿಣಿಯಾದ ಬಳಿಕ…

20 hours ago

ಮೊಹಮ್ಮದ್ ನಲಪಾಡ್ ದಾಂಪತ್ಯ ಜೀವನಕ್ಕೆ ಎರಡನೇ ಹೆಜ್ಜೆ: ಮಲಿಹಾ ಫಾತಿಮಾ ಜೊತೆ ಅದ್ಧೂರಿ ವಿವಾಹ, ಡಿ.ಕೆ. ಶಿವಕುಮಾರ್, ಸುದೀಪ್, ಯಶ್ ಭಾಗಿ

ಮಡಿಕೇರಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್…

20 hours ago

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮಾಜಿ ಎಇಇಗೆ 4 ವರ್ಷ ಜೈಲು, ₹50 ಸಾವಿರ ದಂಡ

ಕಲಬುರಗಿ: ಆದಾಯದ ಮೂಲಕ್ಕೆ ಹೋಲಿಸಿದರೆ ಅಧಿಕ ಪ್ರಮಾಣದ ಆಸ್ತಿ ಹೊಂದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಸಹಾಯಕ…

20 hours ago

ಪ್ರೀತಿಸಿ ಮದುವೆಯಾದ ದಂಪತಿ ದುರಂತ ಅಂತ್ಯ: ಪತ್ನಿಯನ್ನು ಕೊಂದು ಸಿವಿಲ್ ಇಂಜಿನಿಯರ್ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿ ಮನೆಯವರ ಒಪ್ಪಿಗೆಯೊಂದಿಗೆ ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ದಂಪತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೊಲೀಸ್…

2 days ago

ಪತಿ ಕೆಲಸಕ್ಕೆ ಹೋದ ಬಳಿಕ ಮಧ್ಯರಾತ್ರಿ ಆಹಾರ ಮಳಿಗೆಯಲ್ಲಿ ಪ್ರಿಯಕರನೊಂದಿಗೆ ಪತ್ನಿ: ನೇರವಾಗಿ ಸಿಕ್ಕಿಬಿದ ನಂತರ ಹೈಡ್ರಾಮ..!

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ದಾಂಪತ್ಯ ಸಂಬಂಧಕ್ಕೆ ಸಂಬಂಧಿಸಿದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪತಿ ರಾತ್ರಿ ಪಾಳಿಯ…

2 days ago

ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛತೆ: ಹೊಸೂರು ಕೆಪಿಎಸ್ ಶಾಲೆಯ ವಿಡಿಯೋ ವೈರಲ್; ಪೋಷಕರ ಆಕ್ರೋಶ

ಗೌರಿಬಿದನೂರು: ತಾಲ್ಲೂಕಿನ ಹೊಸೂರು ಗ್ರಾಮದ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಯಲ್ಲಿ ವಿದ್ಯಾರ್ಥಿಗಳಿಂದಲೇ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಆರೋಪ ಕೇಳಿಬಂದಿದ್ದು, ಈ…

3 days ago