Crime

ಮೆಟ್ರೋನಲ್ಲಿ ಮಹಿಳೆಯರ ಅಸಭ್ಯ ವಿಡಿಯೋ ಚಿತ್ರೀಕರಣ: ಇನ್‌ಸ್ಟಾ ಖಾತೆ ನಿರ್ವಾಹಕ ದಿಗಂತ್ ಬಂಧನ”

ಬೆಂಗಳೂರು, ಮೇ 23: ಮೆಟ್ರೋ ರೈಲಿನಲ್ಲಿ ಯುವತಿಯರ ಅಸಭ್ಯ ವಿಡಿಯೋಗಳನ್ನು ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ವಿಕೃತ ಮನಸ್ಥಿತಿಯನ್ನು ತೋರಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಬನಶಂಕರಿ ಠಾಣೆಯ ಪೊಲೀಸರು ಪೀಣ್ಯದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ದಿಗಂತ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮೂಲವನು. ತಿಗಳರಪಾಳ್ಯ ನಿವಾಸಿಯಾಗಿ, ಮುರುಗೇಶ್ ಪಾಳ್ಯದ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ದಿನವೂ ಮೇಟ್ರೋ ಮೂಲಕ ಊರು–ಕೆಲಸದ ನಡುವಿನ ಪ್ರಯಾಣವನ್ನಾಡುತ್ತಿದ್ದ ದಿಗಂತ್, ಈ ಅವಧಿಯಲ್ಲಿ ಮಹಿಳೆಯರ ಖಾಸಗಿ ಕ್ಷಣಗಳನ್ನು ಅಕ್ರಮವಾಗಿ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದು, ಇನ್‌ಸ್ಟಾಗ್ರಾಂನಲ್ಲಿ metro_chicks ಎಂಬ ಖಾತೆಯ ಮೂಲಕ 13ಕ್ಕೂ ಹೆಚ್ಚು ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ.

ಈ ಖಾತೆಗೆ ಸುಮಾರು 5,500ಕ್ಕೂ ಹೆಚ್ಚುಇದ್ದರೆಂಬ ಮಾಹಿತಿ ಲಭ್ಯವಾಗಿದೆ. ಮೆಟ್ರೋ ರೈಲು ಹಾಗೂ ನಿಲ್ದಾಣಗಳಲ್ಲಿ ಯುವತಿಯರ ಅಪಪ್ರಕಾರದ ದೃಶ್ಯಗಳನ್ನು ಅಪ್ಲೋಡ್ ಮಾಡಲಾಗಿದ್ದು, ಇತ್ತೀಚೆಗೆ ಈ ಪೇಜ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧಕ್ಕೆ ಗುರಿಯಾಯಿತು. ನಂತರದ ಹಂತದಲ್ಲಿ ಸಂಬಂಧಿತ ಖಾತೆಯಲ್ಲಿ ಇರುವ ಎಲ್ಲ ವಿಡಿಯೋಗಳನ್ನು ಅಜ್ಞಾತವಾಗಿ ಡಿಲೀಟ್ ಮಾಡಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಪ್ರತಿಕ್ರಿಯೆ ನೀಡಿದ್ದು, “ಮಹಿಳೆಯರ ಗೌರವ ಮತ್ತು ಗೌಪ್ಯತೆಗೆ ಧಕ್ಕೆ ತರುವ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಯುತ್ತಿದೆ. ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಬನಶಂಕರಿ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ತಂತ್ರಜ್ಞಾನದ ಸಹಾಯದಿಂದ ಖಾತೆ ನಿರ್ವಾಹಕನ ಪತ್ತೆ ಮಾಡಿ ಬಂಧಿಸಿದ್ದಾರೆ. ಆರೋಪಿಯು ಯಾವುದೇ ಮತ್ತಷ್ಟು ವಿಡಿಯೋಗಳನ್ನು ಶೇರ್ ಮಾಡಿದಿರುವ ವಿಚಾರದಲ್ಲಿಯೂ ತನಿಖೆ ಮುಂದುವರಿದಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

14 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago