ಪ್ರಧಾನಿ ಮೋದಿ ಮುಗಿಸಬೇಕು, ಇಲ್ಲದಿದ್ದರೆ ಭಾರತಕ್ಕೆ ಉಳಿಗಾಲವಿಲ್ಲ. ಕಾಂಗ್ರೆಸ್ ಹಿರಿಯ ನಾಯಕನ ಹೇಳಿಕೆ ಇದೀಗ ಭಾರಿ ವಿವಾದ ಸೃಷ್ಟಿಸಿದೆ. ಗೂಂಡಾ, ರೌಡಿಗಳ ರೀತಿಯ ಹೇಳಿಕೆ ವಿರುದ್ಧ ಭಾರತದೆಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಬಿರುಸಿನ ಪ್ರಚಾರಕ್ಕೆ ಇಳಿದಿದೆ. ಜೈಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿ ಮಾತನಾಡಿದ ಎಸ್‌ಎಸ್ ರಾಂಧವ, ಮೋದಿಯನ್ನು ಮುಗಿಸಬೇಕು. ಮೋದಿ ಇದ್ದರೆ ಭಾರತ ನಾಶವಾಗಲಿದೆ ಎಂದಿದ್ದಾರೆ.
ಅದಾನಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಜಂಟಿ ಸಂಸದೀಯ ಸಮಿತಿ ತನಿಖೆಗೆ ಮುಂದಾಗುತ್ತಿಲ್ಲ. ಉದ್ಯಮಿಗಳಿಗೆ ಭಾರತವನ್ನು ಕೊಟ್ಟು ಬಿಜೆಪಿ ದೇಶವನ್ನೇ ಬರ್ಬಾದ್ ಮಾಡುತ್ತಿದೆ. ಅದಾನಿ ಬಗ್ಗೆ ಮಾತನಾಡುವುದು ಬಿಡಿ. ಮೋದಿ ಮುಗಿಸುವ ಕುರಿತು ಮಾತನಾಡಿ. ಮೋದಿ ಮುಗಿಸಿದರೆ ಭಾರತ ಉದ್ಯಮಿಗಳ ಕೈಯಿಂದ ಬಚಾವ್ ಆಗಲಿದೆ. ಆದರೆ ಮೋದಿ ಇದ್ದರೆ ಹಿಂದುಸ್ಥಾನ ನಿರ್ನಾಮವಾಗಲಿದೆ ಎಂದಿದ್ದಾರೆ.
ಮೋದಿಯ ದೇಶಭಕ್ತಿಯ ಅಸಲಿಯತ್ತು ನಮಗೆ ತಿಳಿದಿದೆ. ಬಿಜೆಪಿಯ ಯಾರೂ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ, ಜೈಲು ಸೇರಿಲ್ಲ. ಕಾಂಗ್ರೆಸ್ ನಾಯಕರು ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ. ಇದು ಕಾಂಗ್ರೆಸ್ ಹಿರಿಯ ನಾಯಕ ಸುಖ್‌ಜಿಂದರ್ ಸಿಂಗ್ ರಾಂಧವ ವಿವಾದಾತ್ಮಕ ಮಾತುಗಳು. ಇದೀಗ ಇದೇ ಮಾತು ವಿವಾದ ಮಾತ್ರವಲ್ಲ, ಆಕ್ರೋಶಕ್ಕೂ ಕಾರಣವಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…