ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ತಲೆತಗ್ಗಿಸುವ ಘಟನೆ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯೊಬ್ಬಳನ್ನು ಆಟೋ ಚಾಲಕ ಅಪಹರಿಸಿ ಹೋಟೆಲ್ ಮಾಲೀಕರಿಗೆ ಒಪ್ಪಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಬಾಲಕಿಯನ್ನು ಹೋಟೆಲ್‌ನಲ್ಲಿ ಬಂಧನದಲ್ಲಿರಿಸಿ ಹಲವು ದಿನಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಬಾಲಕಿ ನಾಪತ್ತೆಯಾದ ನಾಲ್ಕನೇ ದಿನ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ ದೊರೆತ ಸುಳಿವಿನ ಆಧಾರದ ಮೇಲೆ ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಜೂನ್ 24ರಂದು ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ಗಾಯಗಳು ಮತ್ತು ಮಾನಸಿಕ ಆಘಾತದಿಂದ ಬಳಲುತ್ತಿದ್ದ ಬಾಲಕಿ ಕಳೆದ ಹಲವು ದಿನಗಳಿಂದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಈ ದುರ್ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಸಂಬಂಧಪಟ್ಟ ಎಲ್ಲ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುತ್ತಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…